ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

Public TV
1 Min Read
Bidar Theft

– 2 ಲಕ್ಷ ರೂ. ನಗದು ಸಹ ಕಳವು

ಬೀದರ್: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಗುರುನಗರ ಕಾಲೊನಿಯಲ್ಲಿ ನಡೆದಿದೆ.

ಔರಾದ್ (Aurad) ತಾಲೂಕಿನ ಕೃಷಿ ಇಲಾಖೆಯ ಅಧಿಕಾರಿಯಾಗಿದ್ದ ದೂಳಪ್ಪ ಹೊಸಳ್ಳಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

ಘಟನೆ ನಡೆದ ದಿನ, ದಂಪತಿ ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಖದೀಮರು ಮನೆ ಬೀಗ ಮುರಿದು ಒಳನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ 310 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಸೇರಿದಂತೆ ಒಟ್ಟು 26 ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ದಂಪತಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ (New Town Police Station) ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

Share This Article