ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೀಗ ಮುರಿದು, ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಎಗರಿಸಿ ಪರಾರಿಯಾಗಿರುವ ಘಟನೆ ಬೆಳಗಾವಿ (belagavi) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೋಕಾಕ್ ತಹಶೀಲ್ದಾರ್ (Gokak Tehsildar) ಪ್ರಕಾಶ್ ಅವರ ಮನೆಯಲ್ಲಿಯೇ ಲಕ್ಷಾಂತರ ರೂ. ಮೌಲ್ಯದ ಕಳ್ಳತನವಾಗಿದೆ (Theft) . ಗೋಕಾಕ್ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಬೀಗ ಮುರಿದು ಒಳಗೆ ಹೊಕ್ಕ ಖದೀಮರು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ.
ಘಟನೆಯ ಕುರಿತು ಗೋಕಾಕ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 2 ಬಲಿ ಪಡೆದು, ಡ್ರೋನ್ ಕ್ಯಾಮೆರಾಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಕೊನೆಗೂ ಸಿಕ್ಕಿಬಿದ್ದ