ಧಾರವಾಡ/ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕ ವರ್ಗ ಎರಡು ದಿನ ಮುಷ್ಕರಕ್ಕೆ ಕರೆ ಕಟ್ಟಿದೆ. ಮುಷ್ಕರ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿಗಳು ಮಂಗಳವಾರ ಬೆಳಗ್ಗೆಯಿಂದಲೇ ಬಂದ್ ಆಗಿದ್ದವು, ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಒಂದೇ ದಿನ 16 ಅಂಗಡಿಗಳಿಗೆ ಕನ್ನ ಹಾಕಿದ್ದಾರೆ.
ಮುಷ್ಕರಕ್ಕೆ ಹುಬ್ಬಳ್ಳಿಯ ಎಪಿಎಂಸಿ ವರ್ತಕರು ಮತ್ತು ಕಾರ್ಮಿಕರು ಬೆಂಬಲ ನೀಡಿದ್ದರು. ಹೀಗಾಗಿ ಮಂಗಳವಾರ ತಮ್ಮ ಮಳಿಗೆಗೆ ಬಾಗಿಲು ಹಾಕಿ ಪ್ರತಿಭಟೆನಯಲ್ಲಿ ಭಾಗಿಯಾಗಿದ್ದರು. ಅಮರಗೋಳ ಎಪಿಎಂಸಿಯಲ್ಲಿ 16 ಅಂಗಡಿಗಳಿಗೆ ಕನ್ನ ಹಾಕಿರುವ ಕಳ್ಳರು ಸುಮಾರು 7 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಕರಾಮತ್ತು ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಂಗಳವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಗ್ಗಟ್ಟುಗಳನ್ನ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಮುಚ್ಚುವ ಮೂಲಕ ಬಂದ್ ಗೆ ಬೆಂಬಲ ಸೂಚಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv