ಮಂಡ್ಯ: ಮದುವೆ ಸಂಭ್ರಮದಲ್ಲಿದ್ದ ವಧುವಿನ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂ. ನಗದು ಹಾಗು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ನೀಲನಹಳ್ಳಿ ಗೇಟ್ ಬಳಿ ನಡೆದಿದೆ.
ಲಕ್ಷ್ಮಿಸಾಗರ ಗ್ರಾಮದ ಸಣ್ಣ ಹನುಮೇಗೌಡ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಿಂದ 1 ಲಕ್ಷದ 20 ಸಾವಿರ ರೂ. ಹಾಗೂ 20 ಗ್ರಾಂ ಚಿನ್ನವನ್ನು ಖದೀಮರು ಕಳವು ಮಾಡಿದ್ದಾರೆ.
ಮದುವೆ ಕಾರ್ಯಕೆಂದು ಹನುಮೇಗೌಡ ಹಾಗೂ ಅವರ ಕುಟುಂಬಸ್ಥರೆಲ್ಲಾ ಪಾಂಡವಪುರದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪಕ್ಕೆ ತೆರೆಳಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದ್ದನ್ನು ತಿಳಿದ ಕಳ್ಳರು ಶನಿವಾರ ರಾತ್ರಿ 9-10 ಗಂಟೆ ಸುಮಾರಿಗೆ ಮನೆಯನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಮನೆಯಿಂದ 1.20 ಸಾವಿರ ರೂ. ಹಾಗೂ 20 ಗ್ರಾಂ ಚಿನ್ನ ಕಳವಾಗಿದೆ ಎಂದು ಇದೀಗ ಹನುಮೇಗೌಡ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews