ಚಿತ್ರದುರ್ಗ: ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಅಂಗಡಿಯೊಂದಕ್ಕೆ ನುಗ್ಗಿ, ವ್ಯಾಪಾರಿ ಕಣ್ಣಿಗೆ ಖಾರದ ಪುಡಿ (Chilli Powder) ಎರಚಿ ಚಿನ್ನಾಭರಣ (Gold) ಎಗರಿಸಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ.
ನಗರದ ವದನಂ ಟೆಕ್ಸ್ಟೈಲ್ಸ್ ಅಂಗಡಿಗೆ ನುಗ್ಗಿದ ಖದೀಮರು ವ್ಯಾಪಾರಿ ಗೋವಿಂದರಾಜು ಅವರ ಕಣ್ಣಿಗೆ ಖಾರದ ಪುಡಿ ಎರಚಿ ಸುಮಾರು 2.5 ಲಕ್ಷ ರೂ. ಬೆಲೆಬಾಳುವ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಬಂದು ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್
ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಾಣಂತಿ, ಶಿಶುವಿಗೆ ಚಿಕಿತ್ಸೆ ನಿರ್ಲಕ್ಷ್ಯ – ಪ್ರಶ್ನೆ ಮಾಡಿದ್ದಕ್ಕೆ ರೌಡಿ ರೀತಿ ವರ್ತಿಸಿದ ಜಿಲ್ಲಾಸ್ಪತ್ರೆ ವೈದ್ಯ
Web Stories