ಮಡಿಕೇರಿ: ಚಿನ್ನಾಭರಣ (Gold) ಖರೀದಿಸುವ ನೆಪದಲ್ಲಿ ಅಂಗಡಿಯವರ ಗಮನವನ್ನು ಬೇರೆಡೆ ಸೆಳೆದು ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಕುಶಾಲನಗರ (Kushalnagar) ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಚಿತ್ರದುರ್ಗ ಜಿಲ್ಲೆಯ ಪಾಮರಹಳ್ಳಿಯ ಕೈರುನ್ (46) ಹಾಗೂ ಜೈರಾಭಿ (36) ಎಂದು ಗುರುತಿಸಲಾಗಿದೆ. ಬಂಧಿತರಿಂದ 22.34 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ನಮ್ಗೆ ಕಾರ್ ಪಾರ್ಕಿಂಗ್ ಮಾಡೋಕೆ ಸ್ಥಳ ಸಿಕ್ತಿಲ್ಲ – ಪರಿಷತ್ ನಲ್ಲಿ ಶಾಸಕರ ಅಳಲು
Advertisement
Advertisement
ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಥಬೀದಿಯಲ್ಲಿರುವ ಶೀತಲ್ ಚಿನ್ನಾಭರಣದ ಅಂಗಡಿಗೆ ಜೂ.5ರಂದು ಆರೋಪಿಗಳು ಬಂದಿದ್ದರು. ಈ ವೇಳೆ ಬುರ್ಖಾ ಧರಿಸಿದ್ದ ಆರೋಪಿಗಳೊಂದಿಗೆ ಓರ್ವ ಯುವಕ ಸಹ ಇದ್ದ. ಯುವಕ ವ್ಯಾಪಾರಿಯನ್ನು ಮಾತನಾಡಿಸುತ್ತಾ ಗಮನ ಬೇರೆಡೆ ಸೆಳೆದಿದ್ದ. ಈ ವೇಳೆ ಮಹಿಳೆಯರು ಸುಮಾರು 22.4 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿದ್ದರು. ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ ಗಂಗಾಧರಪ್ಪ, ಕುಶಾಲನಗರ ವೃತ್ತದ ಇಸ್ಪೆಕ್ಟರ್ ಬಿ.ಜಿ ಮಹೇಶ್, ನಗರ ಠಾಣಾಧಿಕಾರಿ ರವೀಂದ್ರ ಇವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು.
Advertisement
Advertisement
ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ. ಅಲ್ಲದೇ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ
Web Stories