Chamarajanagar

ತೋಟದ ಮನೆಗೆ ನುಗ್ಗಿ ದರೋಡೆಗೆ ಯತ್ನ: ಅರ್ಧ ಗಂಟೆ ಕಾದಾಟ ನಡೆಸಿ ಕಳ್ಳನ ಹಿಡಿದ ಮಾಲೀಕ

Published

on

Share this

ಚಾಮರಾಜನಗರ: ತೋಟದ ಮನೆಗೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ್ದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿಯಲ್ಲಿ ಘಟನೆ ನಡೆದಿದ್ದು, ಬಂಧಿತ ದರೋಡೆಕೋರರನ್ನು ಗುಂಡ್ಲುಪೇಟೆ ತಾಲೂಕು ಕೋಡಹಳ್ಳಿಯ ಸಿದ್ದ, ಪ್ರದೀಪ ಹಾಗೂ ರವಿ ಎಂದು ಗುರುತಿಸಲಾಗಿದೆ.

ಹೊಂಗಳ್ಳಿ ಹೊರವಲಯಲದಲ್ಲಿ ಕೇರಳ ಮೂಲದ ಪ್ರದೀಪ್ ಅವರು ತೋಟ ಗುತ್ತಿಗೆ ಪಡೆದು ತೋಟದ ಮನೆಯಲ್ಲೇ ವಾಸವಿದ್ದಾರೆ. ತಡ ರಾತ್ರಿ ತೋಟದ ಮನೆಗೆ ನುಗ್ಗಿದ ಮೂವರು ದರೋಡೆಕೋರರ ತಂಡ ಮಾಲೀಕ ಪ್ರದೀಪ್ ಮೇಲೆ ಖಾರದಪುಡಿ ಎರಚಿ ರಾಡ್ ನಿಂದ ಹಲ್ಲೆ ನಡೆಸಿದೆ. ಈ ವೇಳೆ ಮಾಲೀಕ ಪ್ರದೀಪ್ ಸಹ ಪ್ರತಿ ದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಹೊಡೆದಾಟ ನಡೆದಿದೆ. ಇದೇ ಸಂದರ್ಭದಲ್ಲಿ ಮನೆಯ ಒಳಗಿನಿಂದ ಕಬ್ಬಿಣದ ರಾಡ್ ತಂದ ಪ್ರದೀಪ್ ದರೋಡೆಕೋರರ ಮೇಲೆ ಬೀಸಿದ ಪರಿಣಾಮ ಓರ್ವ ದರೋಡೆಕೋರ ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ.

ಉಳಿದಿಬ್ಬರು ದರೋಡೆಕೋರರು ಪ್ರದೀಪ್ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಪತ್ನಿ ಕುತ್ತಿಗೆಯಲ್ಲಿದ್ದ 40 ಗ್ರಾಂ. ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರದೀಪ್ ಗ್ರಾಮಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಧಾವಿಸಿದ ಗ್ರಾಮಸ್ಥರು ಕುಸಿದುಬಿದ್ದು, ಗಾಯಗೊಂಡಿದ್ದ ದರೋಡೆಕೋರನ ಕೈಕಾಲು ಕಟ್ಟಿ ಗುಂಡ್ಲುಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಗುಂಡ್ಲುಪೇಟೆ ಪೊಲೀಸರು ಕುಸಿದುಬಿದ್ದಿದ್ದ, ಗ್ರಾಮಸ್ಥರು ಹಿಡಿದಿಟ್ಟಿದ್ದ ದರೋಡೆಕೋರನನ್ನು ಬಂಧಿಸಿ ಕರೆದೊಯ್ದು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ನೀಡಿದ ಸುಳಿವಿನ ಮೇರೆಗೆ ಸರ್ಕಲ್ ಇನ್‍ಸ್ಪೆಕ್ಟರ್ ಮಹದೇವಸ್ವಾಮಿ, ಎಸ್‍ಐ ರಾಜೇಂದ್ರ ನೇತೃತ್ವದಲ್ಲಿ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಉಳಿದ ಇಬ್ಬರು ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ತೋಟದ ಮಾಲೀಕ ಪ್ರದೀಪ್ ನನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement
Cricket4 mins ago

ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾಕ್ಕೆ ಕನ್ನಡಿಗ ಕೋಚ್?

Bengaluru City4 mins ago

ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ

Chitradurga25 mins ago

ಸಂಪುಟ ರಚನೆ ಪ್ರದೇಶಕ್ಕೆ ಅನುಗುಣವಾಗಿ ಹೈಕಮಾಂಡ್ ನಿರ್ಣಯಿಸಲಿದೆ: ಅಶ್ವಥ್ ನಾರಾಯಣ್

ATM
Chikkaballapur26 mins ago

ಎಟಿಎಂ ಒಡೆದು ಹಣ ದೋಚಿದ ಪ್ರಕರಣ- ಹಣ ಕಳವಾಗಿಲ್ಲ ಎಂದ ಪೊಲೀಸರು

Crime55 mins ago

ವೃದ್ಧೆಯ ಹತ್ಯೆ ಮಾಡಿ ಮೃತದೇಹದೊಂದಿಗೆ ಯುವಕ ಸೆಕ್ಸ್!

Chikkamagaluru58 mins ago

ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ

Bengaluru City1 hour ago

ರಾಜ್ಯದಲ್ಲಿ ಇಂದು 889 ಮಂದಿಗೆ ಕೊರೊನಾ – 14 ಸಾವು

Districts2 hours ago

ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ: ಶೋಭಾ

Bengaluru City2 hours ago

ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11 ರಷ್ಟು ಪಾಲು ರಾಜ್ಯದ್ದು: ಡಾ.ಕೆ.ಸುಧಾಕರ್

Karnataka administered 29.5 Lakh covid vaccine doses in a single day CM Bommai Thanks Modi
Bengaluru City2 hours ago

ರಾಜ್ಯದಲ್ಲಿ ಬೃಹತ್ ಲಸಿಕಾ ಮೇಳ ಯಶಸ್ವಿ: ಸಿಎಂ ಸಂತಸ