ಬೆಂಗಳೂರು: ದೇಶದಲ್ಲಿ ಅನೇಕ ನಕಲಿ ಭಕ್ತರು ಇದ್ದಾರೆ. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದರು.
78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಮೊದಲು ಕಿಚ್ಚು ಹಚ್ಚಿದ್ದೆ ಕರ್ನಾಟಕ. ನೂರು ವರ್ಷಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಾತ್ಮ ಗಾಂಧಿ (Mahatma Gandhi) ಕರ್ನಾಟಕದಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಈ ದಿನವನ್ನು ನೆನಪಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮಾತನಾಡಿದರು. ಇದನ್ನು ಓದಿ : ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್!
ಸ್ವಾತಂತ್ರ್ಯ ಎಂದರೆ ಇತಿಹಾಸ ನೆನಪಿಸುವ ದಿನ. ಸ್ವಾತಂತ್ರ್ಯ ಪೂರ್ವದಲ್ಲಿ ಹೇಗೆ ಇದ್ದೆವು, ಈಗ ಹೇಗೆ ಇದ್ದೇವೆ ಎಂದು ಅವಲೋಕನ ಮಾಡುವ ದಿನ. ಸ್ವಾತಂತ್ರ್ಯ ಎಂದರೆ ಬೆಲೆಕಟ್ಟಿ ಪಡೆಯುವ ವಸ್ತುವಲ್ಲ. ಅದು ನಮ್ಮ ಉಸಿರು. ಇದನ್ನು ಮಹಾತ್ಮ ಗಾಂಧಿ ಹೇಳಿದ್ದಾರೆ ಎಂದರು. ಇದನ್ನು ಓದಿ : ರಾಜ್ಯಪಾಲರಿಂದ ಧ್ವಜಾರೋಹಣ – ಪಂಚ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗ್ತಿದೆ: ಗೆಹ್ಲೋಟ್
ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಇದು. ಈ ಪಕ್ಷದಲ್ಲಿ ಇದ್ದೇವೆ ಅನ್ನುವುದೇ ಹೆಮ್ಮೆಯ ವಿಚಾರ. ನೆಹರೂ (Jawaharlal Nehru), ವಲ್ಲಭಭಾಯಿ ಪಟೇಲ್ (Sardar Vallabhbhai Patel) ಸ್ವಾತಂತ್ರ್ಯ ಹೋರಾಟ ಮಾಡಿಲ್ಲ ಎಂಬ ಸುಳ್ಳು ಸುದ್ದಿ ಗಮನಿಸಿದ್ದೇವೆ. 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ಇದನ್ನು ಓದಿ : ತುಂಗಭದ್ರಾ ಜಲಾಶಯದಲ್ಲಿ ಭರದಿಂದ ಸಾಗಿದ ಗೇಟ್ ಅಳವಡಿಕೆ ಕಾರ್ಯ
ವರ್ಷಪೂರ್ತಿ ಕಾರ್ಯಕ್ರಮಕ್ಕೆ ಕರೆ ಕೊಟ್ಟಿದ್ದೇವೆ. ಅದಕ್ಕಾಗಿ ಒಂದು ಕಮಿಟಿ ರಚಿಸಿದ್ದೇವೆ. ಸಾರ್ವಜನಿಕ ವಲಯ ಕಟ್ಟಿ ಬೆಳಸಿದ್ದು ಕಾಂಗ್ರೆಸ್ ಪಕ್ಷ. ಅಂದು ಬ್ರಿಟಿಷರ ಪರ ನಿಂತಿದ್ದವರನ್ನು ತಿರಸ್ಕಾರ ಮಾಡಬೇಕಿದೆ. ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಲು ಶ್ಯಾಮ್ ಪ್ರಸಾದ್ ಮುಖರ್ಜಿ ಪತ್ರ ಬರೆದಿದ್ದರು ಎಂದು ಇತಿಹಾಸ ಮೆಲುಕು ಹಾಕಿದರು. ಇದನ್ನು ಓದಿ : ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ತ್ವರಿತ ತನಿಖೆ, ಶಿಕ್ಷೆಯ ಅಗತ್ಯವಿದೆ: ಮೋದಿ
ಗ್ಯಾರಂಟಿ ನಿಲ್ಲಿಸುವ ಮಾತೇ ಇಲ್ಲ: ಸಿಎಂ
ಯಾವ ಕಾರಣಕ್ಕೂ ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಸಿಎಂ ಸಿದ್ದರಾಮಯ್ಯ(CM Siddaramaiha) ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ಐದು ಗ್ಯಾರಂಟಿಗಳನ್ನು ರಾಜ್ಯಕ್ಕೆ ಕೊಟ್ಟು ದೇಶಕ್ಕೆ ಮಾದರಿಯಾಗಿದ್ದೇವೆ. ಭಾವನೆಯ ಬದುಕು ಬಿಟ್ಟು ಹಸಿವು ಮುಕ್ತ ರಾಜ್ಯವಾಗಬೇಕು ಎಂಬುದು ನಮ್ಮ ಆಶಯ. ಎಲ್ಲ ವರ್ಗದ ಜನರು ಬದುಕಬೇಕು ಎಂದರು. ಇದನ್ನು ಓದಿ : ಹಾಸನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – 2,500 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ