15ನೇ ಆವೃತ್ತಿಯ ಐಪಿಎಲ್ ಟೂರ್ನಿ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಕ್ರಿಕೆಟ್ ಪ್ರೇಮಿಗಳ ಕಣ್ಣಿಗೆ ಹಬ್ಬ ಶುರುವಾಗಿದೆ. ಅತೀ ಕಡಿಮೆ ಎಸೆತಗಳಲ್ಲಿ ಹೆಚ್ಚು ರನ್ ಹೊಳೆ ಹರಿಸುವ ಮೂಲಕ ಗಮನ ಸೆಳೆಯುವ ಈ ಟೂರ್ನಿಯನ್ನು ಕಣ್ತುಂಬಿಗೊಳ್ಳಲು ಕರ್ನಾಟಕ ಸೇರಿದಂತೆ ಹಲವು ರಾಜ್ಯದ ಪ್ರಮುಖ ನಗರಗಳಲ್ಲಿ ಹೋಟೆಲ್‌ಗಳನ್ನು ಬುಕ್ಕಿಂಗ್ ಮಾಡಿಕೊಳ್ಳಲಾಗುತ್ತದೆ.
ಆದರೆ, ಕೆಲವೊಮ್ಮೆ ಕ್ರೀಡಾ ಪ್ರೇಮಿಗಳ ನಿರೀಕ್ಷೆಯನ್ನು ಹುಸಿಗೊಳಿಸಿ ಅತಿ ಕಡಿಮೆ ರನ್ ಕಲೆಹಾಕಿರುವ ತಂಡಗಳೂ ಇವೆ. ಅವುಗಳ ಮಾಹಿತಿಯನ್ನಿಲ್ಲಿ ನೋಡಬಹುದಾಗಿದೆ.
ಕಡಿಮೆ ರನ್ ಗಳಿಸಿದ ಟೀಂ ಗಳು!
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)
2017ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆದಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 49 ರನ್‌ಗಳಿಗೆ ಆಲೌಟ್ ಆಗುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ ಕಡಿಮೆ ರನ್ ದಾಖಲಿಸಿರುವ ತಂಡಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಕಾರಣವಾಯಿತು. ಇದನ್ನೂ ಓದಿ: ಸಿಎಸ್‍ಕೆ ನಾಯಕ ಸ್ಥಾನಕ್ಕೆ ಧೋನಿ ರಾಜೀನಾಮೆ
ರಾಜಸ್ಥಾನ್ ರಾಯಲ್ಸ್ (RR)
2008ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ರಾಜಸ್ಥಾನ್ ರಾಯಲ್ಸ್ 2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆದಿದ್ದ ಪಂದ್ಯದಲ್ಲಿ 58 ರನ್ ಕಲೆ ಹಾಕುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಮೊತ್ತ ಕಲೆಹಾಕಿದ ತಂಡಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.
ಡೆಲ್ಲಿ ಡೇರ್‌ಡೆವಿಲ್ಸ್ (DD)
ಮೊದಲೇ ಹೇಳಿದಂತೆ ಡೆಲ್ಲಿ ಫ್ರಾಂಚೈಸಿ ಈ ಹಿಂದಿನ ಐಪಿಎಲ್ ಆವೃತ್ತಿಗಳಲ್ಲಿ ತೀರಾ ಕೆಟ್ಟ ಪ್ರದರ್ಶನವನ್ನು ನೀಡಿದ್ದು, 66 ರನ್‌ಗಳ ಅಲ್ಪ ಮೊತ್ತ ಇದಕ್ಕೆ ಮತ್ತೊಂದು ಉದಾಹರಣೆಯಾಗಿದೆ. 2017ರ ಐಪಿಎಲ್ ಆವೃತ್ತಿಯ ಮತ್ತೊಂದು ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 66 ರನ್ ಕಲೆಹಾಕಿ ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಮೊತ್ತ ಗಳಿಸಿದ 3ನೇ ತಂಡ ಎಂದೂ ಕೂಡ ಎನಿಸಿಕೊಂಡಿದೆ. ಇದನ್ನೂ ಓದಿ: 2023 ರಿಂದ ಮಹಿಳಾ ಐಪಿಎಲ್ ಪ್ರಾರಂಭಿಸಲು ಬಿಸಿಸಿಐ ಸಿದ್ಧತೆ
ಡೆಲ್ಲಿ ಕ್ಯಾಪಿಟಲ್ಸ್ (DK)
2019ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡ ಡೆಲ್ಲಿ ಫ್ರಾಂಚೈಸಿ ಆ ಆವೃತ್ತಿಗೂ ಮುನ್ನ ಡೆಲ್ಲಿ ಡೇರ್‌ಡೆವಿಲ್ಸ್ ಎಂಬ ಹೆಸರನ್ನು ಹೊಂದಿತ್ತು. ಸದ್ಯ ಇತ್ತೀಚಿನ ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿರುವ ಡೆಲ್ಲಿ ತಂಡ ಈ ಹಿಂದಿನ ಆವೃತ್ತಿಗಳಲ್ಲಿ ತೀರಾ ಕಳಪೆ ಪ್ರದರ್ಶನವನ್ನು ನೀಡಿರುವ ಸಾಕಷ್ಟು ಉದಾಹರಣೆಗಳಿವೆ. 2017ರ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ ತಂಡ 67ರನ್ ಕಲೆಹಾಕಿತ್ತು. ಈ ಮೊತ್ತ ಐಪಿಎಲ್ ಇತಿಹಾಸದಲ್ಲಿ ತಂಡವೊಂದು ದಾಖಲಿಸಿದ 4ನೇ ಕಡಿಮೆ ಮೊತ್ತ ಎನಿಸಿಕೊಂಡಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ (KKR)
ಐಪಿಎಲ್ 2008ರ ಆವೃತ್ತಿಯಲ್ಲಿ ಕೆಕೆಆರ್ ಉತ್ತಮ ಪ್ರದರ್ಶನ ನೀಡಿದ್ದಕ್ಕಿಂತ ಕಳಪೆ ಪ್ರದರ್ಶನ ನೀಡಿದ್ದೇ ಹೆಚ್ಚು. ಇನ್ನು ಈ ಆವೃತ್ತಿಯಲ್ಲಿ ಇದೇ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಅಂದು ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿದ್ದ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿ ಕೇವಲ 67 ರನ್‌ಗಳಿಗೆ ಆಲೌಟ್ ಆಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕಲೆಹಾಕಿದ್ದ ಈ ಮೊತ್ತ ಐಪಿಎಲ್ ಇತಿಹಾಸದಲ್ಲಿ ತಂಡವೊಂದು ದಾಖಲಿಸಿದ 5ನೇ ಕಡಿಮೆ ಮೊತ್ತ ಎನಿಸಿಕೊಂಡಿತು. ನಂತರ 2ನೇ ಆವೃತ್ತಿಯಲ್ಲಿ ಐಪಿಎಲ್ ಕಿರೀಟವನ್ನೇ ಮುಡಿಗೇರಿಸಿಕೊಂಡಿದ್ದನ್ನು ನೋಡಬಹುದು.