ಮುಂಬೈ: ನಿನ್ನೆಯಷ್ಟೇ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ವಿಶ್ವಕಪ್ ಟೂರ್ನಿಯಲ್ಲಿ ಬೆಂಕಿ ಬ್ಯಾಟಿಂಗ್ ಮಾಡ್ತಾರೆ ಎಂದು ಹೇಳಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಐಪಿಎಲ್ ವೇಳೆ ವಿರಾಟ್ ಕೊಹ್ಲಿ ಜೊತೆಗೆ ಕಿರಿಕ್ ಮಾಡಿದ್ದ ನವೀನ್ ಉಲ್ ಹಕ್‌ನನ್ನ ಬಾಯ್ತುಂಬ ಹೊಗಳಿದ್ದಾರೆ.
View this post on Instagram
Advertisement
ಗಂಭೀರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗ ನವೀನ್ ಉಲ್ ಹಕ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ನಿಮ್ಮಂಥವರು ಬಹಳ ಕಡಿಮೆ, ಎಂದಿಗೂ ಬದಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದರಿಂದ ವಿರಾಟ್ ಕೊಹ್ಲಿ ಅಭಿಮಾನಿಗಳು ಮತ್ತೆ ಗಂಭೀರ್ ಅವರನ್ನ ಕೆಣಕುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಬಾಬರ್ ಆಜಂ ಅವರನ್ನ ಹೊಗಳಿರುವುದಕ್ಕೆ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: RCB ಮ್ಯಾಚ್ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್ – ದ್ರಾವಿಡ್ ಕಾರಿಗೆ ಮುತ್ತಿಗೆ
Advertisement
Advertisement
ನೆನಪಿದೆಯಾ ಕೊಹ್ಲಿ-ನವೀನ್ ಕಿರಿಕ್?
2023ರ ಐಪಿಎಲ್ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?
Advertisement
ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು.
127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.
ಕೊಹ್ಲಿ ಮತ್ತು ನವೀನ್ ನಡುವಣ ಸಣ್ಣ ಜಗಳವನ್ನು ಅಲ್ಲೇ ಇದ್ದ ಎರಡೂ ತಂಡಗಳ ಆಟಗಾರರು ಬಗೆ ಹರಿಸಿದ್ದರು. ಆದರೆ, ಡಗೌಟ್‌ನಿಂದ ಹೊರಬಂದ ಗೌತಮ್ ಗಂಭೀರ್ ಜಗಳವನ್ನು ಮತ್ತಷ್ಟು ಗಂಭೀರವಾಗಿಸಿದರು. ವಿರಾಟ್ ಜೊತೆಗೆ ಮಾತನಾಡುತ್ತಿದ್ದ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ ಅವರನ್ನು ಎಳೆದೊಯ್ದ ಗಂಭೀರ್ ಈ ಸಂದರ್ಭದಲ್ಲಿ ಮಾತಿನ ಚಕಮಕಿಯೇ ನಡೆಸಿದ್ದರು. ಕೊಹ್ಲಿ ಮತ್ತು ಗಂಭೀರ್‌ನ ತಡೆದು ನಿಲ್ಲಿಸಲು ಎರಡೂ ತಂಡದ ಆಟಗಾರರು ಹರಸಾಹನ ನಡೆಸಿದರು. ಈ ವೇಳೆ ಕೆ.ಎಲ್ ರಾಹುಲ್ ಹಾಗೂ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ತಣ್ಣಗಾಗಿಸಿದರು.
Web Stories