ಧಾರವಾಡ: 2022ರ ಕೇಸ್‌ನ್ನು ಈಗ ತೆಗೆದು ಆ ಮೂಲಕ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ (Aravind Eganagoudara) ಹೇಳಿದರು.
ಈ ಬಗ್ಗೆ ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಧಾರವಾಡ (Dharawada) ಗ್ರಾಮೀಣ ಕ್ಷೇತ್ರದಲ್ಲಿ ಚಕ್ಕಡಿ ರಸ್ತೆ ನಿರ್ಮಿಸುವ ಮೂಲಕ ಮಾದರಿಯಾಗಿದ್ದಾರೆ. ಅವರು ಕ್ಷೇತ್ರದಲ್ಲಿ ಇಲ್ಲದೇ ಹೋದರೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ ಎಂದರು. ಇದನ್ನೂ ಓದಿ: Valmiki Scam | ನಾಗೇಂದ್ರಗೆ ಬಿಗ್ ರಿಲೀಫ್ – ಜಾಮೀನು ಮಂಜೂರು
ಮುನಿರತ್ನ ಹಾಗೂ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಬೇರೆ ಬೇರೆಯಾಗಿದೆ. ವಿನಯ್ ಕುಲಕರ್ಣಿ ಅವರ ಅತ್ಯಾಚಾರ ಕೇಸ್ ಬೇರೆಯಾಗಿದೆ. ಇಲ್ಲಿ ಮೊದಲು ವಿನಯ್ ಅವರೇ ತಮಗೆ ಸಾಕಷ್ಟು ತೊಂದರೆ ಕೊಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಶಾಸಕ ಅರವಿಂದ ಬೆಲ್ಲದ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸುತ್ತಿದ್ದಾರೆ. ನಮ್ಮ ನಾಡಿನ ಕಾನೂನಿನ ಬಗ್ಗೆ ಅವರಿಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ
ಬಿಜೆಪಿಯವರು(BJP) ಸಣ್ಣ ಮಕ್ಕಳು ಜಗಳವಾಡಿದರೂ ಅದನ್ನು ಸಿಬಿಐಗೆ ಕೊಡಿ ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಈಗ ವಿನಯ್ ವಿರುದ್ಧ ಜೀವ ಬೆದರಿಕೆ, ಅತ್ಯಾಚಾರ ಆರೋಪದಡಿ ಪ್ರಕರಣ ರೈತ ಮಹಿಳೆ ನೀಡಿರುವ ದೂರು ದಾಖಲಾಗಿದ್ದು, ಅದರ ಬಗ್ಗೆ ಸಿಐಡಿ ತನಿಖೆ ನಡೆಸುತ್ತದೆ. ಪದೇ ಪದೇ ಈ ರೀತಿಯ ಆರೋಪಗಳನ್ನು ವಿನಯ್ ಕುಲಕರ್ಣಿ ಅವರ ಮೇಲೆ ಮಾಡುತ್ತಲೇ ಬರಲಾಗುತ್ತಿದೆ. ಇದೊಂದು ವ್ಯವಸ್ಥಿತ ಹುನ್ನಾರ. ವಿನಯ್ ಅವರ ಜೊತೆ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದಾರೆ. ಅವರು ಈ ಎಲ್ಲ ಪ್ರಕರಣಗಳಿಂದ ಆರೋಪ ಮುಕ್ತರಾಗಿ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ದರ್ಶನ್, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ