ಶಿವಮೊಗ್ಗ: ಜಿಲ್ಲೆಯ ಸಾಗರದ ತಾಲೂಕಿನ ಯುವಕನ ರಕ್ತದ ಮಾದರಿಯಲ್ಲಿ ನಿಪಾ ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದು ಡಿಹೆಚ್‍ಒ ಡಾ. ವೆಂಕಟೇಶ್ ಹೇಳಿದ್ದಾರೆ.
ನಿಪಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯ ಲ್ಯಾಬ್ ನಿಂದ ರಕ್ತದ ಮಾದರಿಯ ಪರೀಕ್ಷೆಯ ಫಲಿತಾಂಶ ಬಂದಿದ್ದು, ಅದರಲ್ಲಿ ನೆಗೆಟಿವ್ ಬಂದ ಕಾರಣ ಜಿಲ್ಲೆಯಲ್ಲಿ ಯಾರು ಭಯ ಪಡುವ ಅಗತ್ಯವಿಲ್ಲ ಎಂದು ಡಿಹೆಚ್‍ಒ ಡಾ. ವೆಂಕಟೇಶ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನು ಓದಿ: ಮಲೆನಾಡಿಗೂ ಕಾಲಿಟ್ಟಿತೇ ನಿಪಾ ಸೋಂಕು?
Advertisement
ಕೇರಳದ ಕಾಸರಗೋಡಿನಲ್ಲಿ ಕೆಲಸ ಮಾಡುತ್ತಿದ್ದ ಶಿರವಂತೆಯ ಮಿಥುನ್ ನಿಪಾ ವೈರಸ್ ಹಾವಳಿ ಜೋರಾಗಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮರಳಿದ್ದರು. ಈ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೇರಳದಲ್ಲಿ ಈ ಸೋಂಕಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸಿದ್ದ ಮಿಥುನ್‍ಗೂ ನಿಫಾ ಸೊಂಕು ತಗುಲಿದೆ ಎನ್ನುವ ಶಂಕೆ ಉಂಟಾಗಿತ್ತು.