– ರಾಮನಗರ, ಮಂಗಳೂರು ಭಾಗದಲ್ಲಿ 150 ಮಿಲಿಮೀಟರ್ ಮಳೆ
ಬೆಂಗಳೂರು: ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ (Storm) ಸಹಿತ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ವರುಣನ ಆಗಮನದಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತಂಪೇರಿದೆ. ಹಳೆ ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Delhi Weatherː ದೆಹಲಿಯಲ್ಲಿ ತಾಪಮಾನ ಏರಿಕೆ – ಮಾನ್ಸೂನ್ ವಿಳಂಬ ಸಾಧ್ಯತೆ
ರಾಮನಗರ (Ramanagara) ಮತ್ತು ಮಂಗಳೂರು (Mangaluru) ಭಾಗದಲ್ಲಿ ಸುಮಾರು 150 ಮಿಲಿಮೀಟರ್‌ಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುವ ಕಾರಣ ಜನರು ಮನೆಯಲ್ಲಿಯೇ ಸುರಕ್ಷಿತವಾಗಿರಿ. ಅಲ್ಲದೇ ಆದಷ್ಟು ಮಳೆಯ ಸಮಯದಲ್ಲಿ ಅಂಡರ್ ಪಾಸ್‌ಗಳಲ್ಲಿ ಸಂಚರಿಸಬೇಡಿ ಎಂದು ಹವಾಮಾನ ಇಲಾಖೆ ಜನರಿಗೆ ಸಲಹೆ ನೀಡಿದೆ. ಇದನ್ನೂ ಓದಿ: Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್ – 74 ಸಾವಿರ ಮಂದಿ ಸ್ಥಳಾಂತರ