ತುಮಕೂರು: ಸಂಪುಟ ಪುನಾರಚನೆಯ (Cabinet Reshuffle) ಸುಳಿವು ಇದೆ. ಈ ಮುನ್ಸೂಚನೆ ಇರೋದರಿಂದಲೇ 30 ಜನ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿದ್ದಲ್ವಾ ಎಂದು ಹೇಳುವ ಮೂಲಕ ಸಂಪುಟ ಪುನಾರಚನೆ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅಧಿಕೃತಗೊಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೂರ್ನಾಲ್ಕು ಬಾರಿ ಶಾಸಕರಾದವರು ಸಚಿವ ಸ್ಥಾನ ಕೇಳೋದು ಅವರ ಹಕ್ಕು ಅದರಲ್ಲಿ ತಪ್ಪೇನಿಲ್ಲ. ಆದರೆ ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಸಂಪುಟ ಪುನಾರಚನೆ ಆಗಲಿ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು. ಇದನ್ನೂ ಓದಿ: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಯುವ ಸಲುವಾಗಿಯೇ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿದ್ದು. ಅವರು ಎಲ್ಲಾಕಡೆಯೂ ಹುಡುಕಿ ಹುಡುಕಿ ಶುದ್ಧ ಮಾಡುತ್ತಿದ್ದಾರೆ. ಆ ಅಕ್ರಮಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಹಾಗಾಗಿಯೇ ಎಫ್‌ಐಆರ್ ಆಗುತ್ತಿದೆ ಎಂದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್ ಕಾರ್ಯಕರ್ತರ ಆಯ್ಕೆ
ಅದೇ ವೇಳೆ ಕೇಂದ್ರ ಸರ್ಕಾರ 33% ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡುತ್ತಿರುವುದು ಸ್ವಾಗತಾರ್ಹ ಎಂದ ಪರಮೇಶ್ವರ್, ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಹಿಂದೂ ಕೋಡ್ ಬಿಲ್ಲಲ್ಲಿ ಮಹಿಳಾ ಮೀಸಲಾತಿಗಾಗಿ ಹೋರಾಟ ಮಾಡಿದ್ದರು. 20 ವರ್ಷದ ಹಿಂದೆಯೇ ಕಾಂಗ್ರೆಸ್ ಈ ಬಿಲ್ ಅನ್ನು ತರಲು ಮಸೂದೆ ಮಂಡನೆ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕಾರ ಆಗಿರಲಿಲ್ಲ. ಪ್ರಧಾನಿ ಮೋದಿ ಈಗ ಮಹಿಳಾ ಮೀಸಲಾತಿ ಬಿಲ್ ತರಲು ಹೊರಟಿದ್ದಾರೆ. ಆದರೆ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಿ ಮಸೂದೆ ಮಂಡನೆ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: 2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್

