ಬೆಂಗಳೂರು: ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ. ಇದೊಂದು ಸಾಮಾನ್ಯವಾದ ಪ್ರಕ್ರಿಯೆ ಆಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ. ಸಾರಿ ಮತ್ತು ILI ಕೇಸ್ ಅವು. ಈ ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದರು.
Advertisement
Advertisement
ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ
Advertisement
Advertisement
ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಚುಚ್ಚು ಮದ್ದಿನಿಂದ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಮಾತನಾಡಿ, ಸೆಪ್ಟಿಕ್ ಶಾಕ್ ಸಿಂಡ್ರೋಮ್ ನಿಂದ ಸತ್ತಿರೋ ಬಗ್ಗೆ ವರದಿ ಆಗಿದೆ. ಆದರೂ ಮತ್ತೊಂದು ಸುತ್ತಿನ ತನಿಖೆಗೆ ಸೂಚನೆ ನೀಡಿದ್ದೇನೆ. ಎರಡು ದಿನಗಳಲ್ಲಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಮಾಡಲು ಸೂಚನೆ ನೀಡಲಾಗಿದೆ. ಅಲ್ಲಿನ ANM ಮತ್ತು ಫಾರ್ಮಸಿಸ್ಟ್ ರನ್ನ ತಕ್ಷಣ ಅಮಾನತು ಮಾಡಲು ಸೂಚನೆ ನೀಡಿದ್ದೇನೆ. ಈಗ ಅಮಾನತು ಆಗುತ್ತಾರೆ. ನೋಡಲ್ ಆಫೀಸ್ ರನ್ನ ತನಿಖೆಗೆ ಕಳುಹಿಸುತ್ತಿದ್ದೇನೆ. ಪ್ರೊಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ ಅಂತ ತನಿಖೆ ಮಾಡಲಾಗುತ್ತೆ. ಎರಡು ದಿನಗಳಲ್ಲಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸಿಎಂ ಸಭೆಯಲ್ಲಿ ಮತ್ತಷ್ಟು ರೂಲ್ಸ್ ಬಗ್ಗೆ ಚರ್ಚೆ ಮಾಡ್ತೀವಿ. ಸರ್ಕಾರಕ್ಕೆ ತಜ್ಞರು ವರದಿ ಕೊಟ್ಟಿದ್ದಾರೆ. ತಜ್ಞರ ವರದಿ ಬಗ್ಗೆ ಚರ್ಚೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ವಿಸ್ತರಣೆ ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡ್ತೀವಿ. ಸಿಎಂ ಸಭೆ ಬಳಿಕ ಯಾವ ತೀರ್ಮಾನ ಅಂತ ಹೇಳ್ತೀವಿ. ತಜ್ಞರು ಕೂಡಾ ಸಭೆಯಲ್ಲಿ ಇರುತ್ತಾರೆ. ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ. ಈಗಿರುವ ನಿಯಮ ಮುಂದುವರೆಯುತ್ತವಾ ಅನ್ನೋದರ ಬಗ್ಗೆ ಸಿಎಂ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೇಳಿದರು.
ಕೊರೊನಾ ಕಂಟ್ರೋಲ್ ಗೆ ಬೇಕಾದ ನಿಯಮ ಮಾಡುತ್ತೇವೆ. ಇದಕ್ಕಾಗಿ 3 ದಿನಕ್ಕೊಮ್ಮೆ ಸಿಎಂ ಸಭೆ ಮಾಡುತ್ತಿದ್ದಾರೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಾವಿನ ಪ್ರಮಾಣ ಕಡಿಮೆ ಮಾಡೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ನಾವು ಕ್ರಮ ತಗೋತೀವಿ. ನಾವು ಹೆಚ್ಚು ಟೆಸ್ಟ್ ಮಾಡ್ತಿದ್ದೇವೆ. ಅದಕ್ಕೆ ನಮ್ಮಲ್ಲಿ ಕೇಸ್ ಜಾಸ್ತಿ ಬರ್ತಿದೆ ಅಷ್ಟೆ. ಕೇಸ್ ಹೆಚ್ಚಳದ ಬಗ್ಗೆ ಸುಧಾಕರ್ ಸ್ಪಷ್ಟನೆ ನೀಡಿದರು.