ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬಳಿಕ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದೆ. ಶೀಘ್ರವೇ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಖುದ್ದು ಸುಳಿವು ನೀಡಿದ್ದಾರೆ.
ಹಾಲಿನ ದರ ಏರಿಕೆ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?
ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 17 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ನಾಯಿ ಶವ ಪತ್ತೆ
ಒಟ್ಟಾರೆ ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ