ನವದೆಹಲಿ: ಮೈಸೂರು ರಾಜ ಮನೆತನಕ್ಕೆ 3,400 ಕೋಟಿ ರೂ. ಟಿಡಿಆರ್ (TDR) ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ (Supreme Court) ಮತ್ತೊಂದು ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ (State Government) ಸಿದ್ಧತೆ ಮಾಡಿಕೊಂಡಿದ್ದು, ಸದ್ಯ ಕೋರ್ಟ್‌ನಲ್ಲಿ ಠೇವಣಿ ಇಟ್ಟಿರುವ ಟಿಡಿಆರ್ ಅನ್ನು ರಾಜಮನೆತನಕ್ಕೆ ವರ್ಗಾಯಿಸದಂತೆ ಮನವಿ ಮಾಡುವ ಸಾಧ್ಯತೆಯಿದೆ.
ಬೆಂಗಳೂರಿನ ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15 ಎಕರೆಗಳಿಗೂ ಅಧಿಕ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ 3,400 ಕೋಟಿ ರೂ.ಗಳ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಪ್ರಮಾಣಪತ್ರಗಳನ್ನು ತನ್ನಲ್ಲಿ ಠೇವಣಿ ಇಡುವಂತೆ ಕೋರ್ಟ್ ಸೂಚನೆ ನೀಡಿತ್ತು.ಇದನ್ನೂ ಓದಿ: ಮಾರಿಷಸ್‌ನಲ್ಲಿ ಹೊಸ ಸಂಸತ್ ನಿರ್ಮಾಣಕ್ಕೆ ಭಾರತದ ಸಹಕಾರ: ಪ್ರಧಾನಿ ಮೋದಿ
ಕಳೆದ ವಿಚಾರಣೆಯಲ್ಲಿ ರಿಜಿಸ್ಟಾರ್ ಬಳಿ ಟಿಡಿಆರ್ ಠೇವಣಿ ಇಡಲು ಪೀಠ ಸೂಚಿಸಿತ್ತು. ಈ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಕಪಿಲ್ ಸಿಬಲ್, ಇದನ್ನು ರಾಜಮನೆತನಕ್ಕೆ ನೀಡುವುದಿಲ್ಲ ಎನ್ನುವ ಬಗ್ಗೆ ಖಾತ್ರಿ ಕೇಳಿದ್ದರು. ಆದರೆ ಇದಕ್ಕೆ ನಿರಾಕರಿಸಿದ್ದ ಕೋರ್ಟ್ ಇದನ್ನು ನೀವು ನಮಗೆ ಹೇಳಿವಂತಿಲ್ಲ ಎಂದು ಹೇಳಿತ್ತು.
ಸದ್ಯ ನ್ಯಾಯಾಂಗ ನಿಂದನೆಯಿಂದ ಪಾರಾಗಲು ಮಾ.7 ರಂದು ಟಿಡಿಆರ್ ಅನ್ನು ಠೇವಣಿ ಇಟ್ಟಿರುವ ಸರ್ಕಾರ ಅದನ್ನು ಕೋರ್ಟ್ ಮೂಲಕವೇ ರಾಜಮನೆತನ ಪಡೆಯಬಹುದು ಎನ್ನುವ ಭೀತಿಯಲ್ಲಿದೆ. ಹೀಗಾಗಿ ರಾಜಮನೆತನಕ್ಕೆ ಟಿಡಿಆರ್ ವರ್ಗಾಯಿಸದಂತೆ ಮನವಿ ಮಾಡಿ, ಪ್ರತ್ಯೇಕ ಅರ್ಜಿಯೊಂದನ್ನು ಸೋಮವಾರ ಸಲ್ಲಿಕೆ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.ಇದನ್ನೂ ಓದಿ: ನಾರಿಮಣಿಯರ ಮನಗೆದ್ದ ಬ್ಯೂಟಿಫುಲ್ ಫ್ರಾಕ್‌ಗಳಿವು