ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರುನಾಡಿಗೆ ಮುಂಗಾರಿನ ಮುನ್ಸೂಚನೆಯ ಗುಡ್‌ನ್ಯೂಸ್ ಸಿಕ್ಕಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರ್ನಾಟಕ (Karnataka) ಸೇರಿದಂತೆ ನೈರುತ್ಯ ಭಾರತದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆಂಟಿ ಮೀಟರ್‌ನಷ್ಟಿದೆ. ದೀರ್ಘಕಾಲಿನ ಮುಂಗಾರು ಮಳೆ ಮುನ್ಸೂಚನೆ 2024ರ ಅನ್ವಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಸೇತುವೆಯಿಂದ ಬಸ್ ಕೆಳಗೆ ಬಿದ್ದು 5 ಮಂದಿ ಸಾವು
Advertisement
Advertisement
ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀನಷ್ಟಿದ್ದು, ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ. ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ವಾರ್ಷಿಕ ಮಳೆಯ 74% ಕೊಡುಗೆ ನೀಡುತ್ತದೆ. ಈ ಬಾರಿ ದೇಶದಲ್ಲಿ ಸರಾಸರಿ 87 ಸೆಂಟಿ ಮೀಟರ್‌ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್
Advertisement