ಹಾಸನ: ಮತಾಂತರ ಕಾಯ್ದೆಗಿಂತ ಮುಖ್ಯವಾಗಿ ರಾಜ್ಯದಲ್ಲಿ ಮಳೆಯಿಂದ ಬೆಳೆ ಹಾಳಾಗಿದೆ. ರಾಗಿ, ಶುಂಠಿ, ಭತ್ತ, ಜೋಳ ಬೆಳೆಗಳು ನಾಶವಾಗಿವೆ, ಮನೆಗಳು ಕುಸಿದು ಬಿದ್ದು ಮನುಷ್ಯರು ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಚಳಿಗಾಲದ ಅಧಿವೇಶನದಲ್ಲಿ ಹೆಚ್ಚು ಮಹತ್ವವನ್ನು ಕೊಡುತ್ತೇವೆ ಎಂದು ಜೆಡಿಎಸ್ ಶಾಸಕ ಬಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮತಾಂತರ ಕಾಯ್ದೆಗಿಂತ ಮುಖ್ಯವಾಗಿ ಮಳೆಯಿಂದ ಬೆಳೆ ಹಾಳಾಗಿದೆ. ಇದಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ. ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುಬಹುದೆಂಬ ಸಿದ್ಧತೆ ಮಾಡಿಕೊಂಡಿದ್ದಾರೆ. ಏನೇನು ಮಸೂದೆ ಜಾರಿಗೆ ತರುತ್ತಾರೆ ಎಂಬುದರ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಮತಾಂತರ ಕಾಯ್ದೆಗಿಂತ ಮುಖ್ಯವಾಗಿ ಮಳೆಯಿಂದ ಬೆಳೆ ಹಾಳಾಗಿದೆ. ರಾಗಿ, ಶುಂಠಿ, ಭತ್ತ, ಜೋಳ ಬೆಳೆಗಳು ನಾಶವಾಗಿವೆ, ಮನೆಗಳು ಕುಸಿದು ಬಿದ್ದಿವೆ. ಇದಕ್ಕೆ ಹೆಚ್ಚು ಮಹತ್ವವನ್ನು ಕೊಡುತ್ತೇವೆ. ನಾವು ಬೆಳೆಹಾನಿ ಬಗ್ಗೆ ಮೊದಲ ಪ್ರಾಶಸ್ತ್ಯ ನೀಡುತ್ತೇವೆ ಎಂದರು. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ
Advertisement
Advertisement
ಮತಾಂತರ ನಿಷೇದ ಕಾಯ್ದೆ ಬಗ್ಗೆ ಏನೇನಿದೆ ಅಂಥಾ ನಮ್ಮ ನಾಯಕರ ಜೊತೆ ಚರ್ಚೆ ಮಾಡಿ ಭಾಗವಹಿಸುತ್ತೇವೆ. ಅದರ ಬಗ್ಗೆ ಏನೇನು ಡಿಟೇಲ್ಸ್ ತಂದಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಅದು ಬಂದ ಮೇಲೆ ಪರಿಶೀಲನೆ ಮಾಡುತ್ತೇವೆ. ನಮ್ಮದು ಜಾತ್ಯಾತೀತ ರಾಷ್ಟ್ರ. ಈ ವ್ಯವಸ್ಥೆಯಲ್ಲಿ ನಮ್ಮ ನಾಯಕರಾದ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಎಲ್ಲಾ ನಮ್ಮ ರಾಜ್ಯಮಟ್ಟದ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಆನಂತರ ಅದರ ಬಗ್ಗೆ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ದುರುದ್ದೇಶಪೂರ್ವಕ: ಸಿದ್ದರಾಮಯ್ಯ ಟೀಕೆ
Advertisement
Advertisement