ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು ನೀಡಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ದೆಹಲಿಗೆ ಹೋಗುತ್ತಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಸಿಎಂ ಮಾತನಾಡುತ್ತಾರೆ. ಸಿಎಂ, ಡಿಸಿಎಂ, ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ
Advertisement
Advertisement
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಇವೆ. ಡಿಕೆಶಿ (DK Shivakumar) ಅವರು ಅಧ್ಯಕ್ಷರಾಗಿ ಒಳ್ಳೆಯ ಕೆಲಸ ಮಾಡಿ ಪಕ್ಷ ಕಟ್ಟಿದ್ದಾರೆ. ಹಗಲು ರಾತ್ರಿ ಕೆಲಸ ಮಾಡಿ ಅಧಿಕಾರಕ್ಕೆ ಪಕ್ಷವನ್ನು ತಂದಿದ್ದಾರೆ. ಆದರೆ ಅವರ ಅವಧಿ 5 ವರ್ಷಕ್ಕಿಂತ ಹೆಚ್ಚಾಗಿದೆ. ಅವರಿಗೆ ಬೇರೆ ಬೇರೆ ಕೆಲಸಗಳು ಬಹಳಷ್ಟು ಇವೆ. ಅವರು ಮುಂದುವರೆದರೂ ನಮಗೇನು ಸಮಸ್ಯೆ ಇಲ್ಲ. ಆದರೆ ಯಾರಿಗಾದರೂ ಪೂರ್ತಿ ಅವಧಿಗೆ ಅಧ್ಯಕ್ಷ ಸ್ಥಾನ ಕೊಡೋದು ತಪ್ಪಲ್ಲ.ಅದು ಯಾವ ರೀತಿ ತೀರ್ಮಾನ ಆಗುತ್ತದೆ ನೋಡೋಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪರೋಕ್ಷವಾಗಿ ಒತ್ತಾಯಿಸಿದರು. ಇದನ್ನೂ ಓದಿ: ಸೈಬರ್ ವಂಚನೆ ಪ್ರಕರಣ – ದಾಳಿ ನಡೆಸಿದ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ
Advertisement