ರಾಯಚೂರು: ನನ್ನ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೊಂದಾಣಿಕೆ ಆಗಲ್ಲ ಎಂದು ರಾಯಚೂರಿನ (Raichur) ದೇವದುರ್ಗ (Devadurga) ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ (Karemma Nayak) ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇವದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸತತವಾಗಿ ನನಗೆ ಕಾಟ ನೀಡಿದ್ದಾರೆ. ನನ್ನ ಮೇಲೆ ಮತ್ತು ನನ್ನ ಮಗಳ ಮೇಲೆ ಅಟ್ಯಾಕ್ ಮಾಡಿದ್ರು. ಜೆಡಿಎಸ್ ಕಾರ್ಯಕರ್ತರಿಗೆ ಚಪ್ಪಲಿಯಿಂದ ಹೊಡೆಯುವುದಾಗಿ ಹೇಳಿದ್ರು ಎಂದು ಆರೋಪಿಸಿದರು.
Advertisement
Advertisement
ದೇವದುರ್ಗದಲ್ಲಿ ಬಿಜೆಪಿಯವರು ಏನೇನೋ ಕಷ್ಟ ನೀಡಿದ್ದಾರೆ ಎಂಬುವುದು ನನ್ನ ವರಿಷ್ಠರಿಗೆ ಗೊತ್ತಿದೆ. ದೇವೇಗೌಡರು ನನಗೆ ಮಗಳ ಸಮಾನವಾಗಿ ನೋಡಿದ್ದಾರೆ. ನನಗೆ ನೋವು ಆದಾಗ ಅವರು ಕಷ್ಟ ಮತ್ತು ನೋವು ಪಟ್ಟಿದ್ದಾರೆ. ನನ್ನ ಪಾರ್ಟಿ ಯಾವತ್ತೂ ನನಗೆ ಟಾರ್ಗೆಟ್ ಮಾಡಲ್ಲ. ನೀನು ಹೇಗೆ ಇರಬೇಕಂತೀಯೋ ಹಾಗೇ ಇರಮ್ಮ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ – ಜೆಡಿಎಸ್‌ನಲ್ಲಿಅಸಮಾಧಾನವಿಲ್ಲ ಎಂದ ಖಾಶೆಂಪೂರ್
Advertisement
Advertisement
ಕುಮಾರಣ್ಣನಿಗೆ ಕೆಟ್ಟದಾಗಿ ಬೈದ ವ್ಯಕ್ತಿ ಇಲ್ಲಿದ್ದಾನೆ. ದೇವೇಗೌಡರ ಕುಟುಂಬಕ್ಕೆ ಬೈದ ವ್ಯಕ್ತಿಯ ಪಕ್ಷದೊಂದಿಗೆ ನಾನು ಹೊಂದಾಣಿಕೆ ಆಗಬೇಕಾ? ಎಂದು ಪರೋಕ್ಷವಾಗಿ ಮಾಜಿ ಶಾಸಕ ಶಿವನಗೌಡ ನಾಯಕ್ ವಿರುದ್ಧ ಕಿಡಿಕಾರಿದರು. ರಾಷ್ಟ್ರೀಯ ಪಕ್ಷದ ಬಗ್ಗೆ ನಾನು ಏನು ಮಾತನಾಡಲ್ಲ. ಅವರದೇ ಆದ ಸಿದ್ಧಾಂತ ಇರುತ್ತದೆ. ಕ್ಷೇತ್ರದ ಜನರ ಮನಸ್ಸಿಗೆ ಧಕ್ಕೆ ಆಗದಂತೆ ನಾನು ನಡೆದುಕೊಳ್ಳುವೆ ಎಂದು ಶಾಸಕಿ ಕರೆಮ್ಮ ನಾಯಕ್ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ: ಡಿಕೆಶಿ
Web Stories