ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತೆ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಲ್ಲಿ ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಹೆಚ್ಚಿರ್ತಾರೆ: ಜೋಶಿ ಟೀಕೆ
ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸೂಚಿಸಿದ್ದರೂ ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಎರಡು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್ ಬೀಸಿ ಚರ್ಚೆಗೆ ಗ್ರಾಸವಾಗಿದ್ದಾರೆ.

