‘ಡಂಕಿ’ ಸಿನಿಮಾ ಬಿಡುಗಡೆಯಲ್ಲಿ ಯಾವುದೇ ಬದಲಾವಣೆ ಇಲ್ಲ : ನಟ ಶಾರುಖ್

Public TV
1 Min Read
Shah Rukh Khan 1

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ಹ್ಯಾಟ್ರಿಕ್ ಸಿಡಿಸಲು ಸಿದ್ಧರಾಗುತ್ತಿದ್ದಾರೆ. ಸತತವಾಗಿ ಈಗಾಗಲೇ ಅವರ ಎರಡು ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಗೆಲುವು ಸಾಧಿಸಿವೆ. ಪಠಾಣ್ ಮತ್ತು ಜವಾನ್ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ನಿರ್ಮಾಪಕರ ಜೇಬು ತುಂಬಿಸಿವೆ. ಎರಡೂ ಚಿತ್ರಗಳು ಸಾವಿರ ಕೋಟಿ ಕ್ಲಬ್ ಕೂಡ ಸೇರಿವೆ. ಹಾಗಾಗಿ ಇದೇ ವರ್ಷ ಅವರ ಮತ್ತೊಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಅಂದಿದ್ದಾರೆ.

Shah Rukh Khan

ಶಾರುಖ್ ಖಾನ್ ನಟನೆ ಡಂಕಿ (Dunky) ಸಿನಿಮಾ ಡಿಸೆಂಬರ್ 22 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅಂದೇ ಪ್ರಭಾಸ್ (Prabhas) ನಟನೆಯ ಸಲಾರ್ ಸಿನಿಮಾ ಕೂಡ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‍ ನ ಸಿನಿಮಾ ಸಲಾರ್ (Salar) ಆಗಿರುವುದರಿಂದ ಇದು ಕೂಡ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿದೆ. ಹಾಗಾಗಿ ಇಬ್ಬರಲ್ಲಿ ಒಬ್ಬರು ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಶಾರುಖ್ ಖಾನ್. ಈಗಾಗಲೇ ನಾವು ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದೇವೆ. ಹಾಗಾಗಿ ಮತ್ತೆ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ನಿಗಧಿತ ದಿನಾಂಕದಂದೇ ಸಿನಿಮಾ ರಿಲೀಸ್ ಆಗಿದೆ ಎಂದಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article