ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ, ಇದೆಲ್ಲಾ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಮತ್ತು ನನ್ನ ಭೇಟಿ ಸಹಜ. ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ ಗಾಳ – ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?
Advertisement
Advertisement
ನಾನು ದೆಹಲಿಯಿಂದ ಸಾಮಾನ್ಯನಾಗಿ ಬಂದಿದ್ದೇನೆ. ಯಾವುದೇ ಲಿಸ್ಟ್ ತಂದಿಲ್ಲ. ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಇರುತ್ತಾರೆ. ಮಾಧ್ಯಮಗಳಲ್ಲಿ ಮಾತ್ರ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಸುದ್ದಿ ಪ್ರಸಾರವಾಗುತ್ತಿದೆ ಎಂದಿದ್ದಾರೆ.
Advertisement
PSI ನೇಮಕಾತಿಯಲ್ಲಿ ಅಕ್ರಮ ಕುರಿತು ಮಾತನಾಡಿದ ಅವರು, ಮೊದಲಿಗೆ ಸುದ್ದಿ ಕೊಟ್ಟ ಪ್ರಿಯಾಂಕ್ ಖರ್ಗೆ ಈಗ ಯಾಕೆ ತನಿಖೆಗೆ ಸಹಕಾರ ಕೊಡುತ್ತಿಲ್ಲ? ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ 24 ಗಂಟೆ ಪ್ರಿಯಾಂಕ್ ಮನೆಯಲ್ಲಿ ಇರುತ್ತಿದ್ದರು. ಅಂತಹವರು ಹಗರಣದಲ್ಲಿ ಭಾಗಿಯಾಗಿದ್ದಾರೆ. ಅದನ್ನು ಮರೆಮಾಚಲು ಪ್ರಿಯಾಂಕ್ ಯತ್ನಿಸಿದ್ದಾರೆ. ನ್ಯಾಯಾಂಗ ತನಿಖೆಯಲ್ಲಿ ಬಂಧನ ಸಾಧ್ಯತೆ ಕಡಿಮೆ. ಅದಕ್ಕಾಗಿ ನ್ಯಾಯಾಂಗ ತನಿಖೆಗೆ ಆಗ್ರಹ ಮಾಡುತ್ತಿದ್ದಾರೆ ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ಸಿಎಂ ಸ್ಥಾನ ಲಾಬಿಗೆ ಅವಕಾಶವಿಲ್ಲ, ಯತ್ನಾಳ್ ಹೇಳಿಕೆ ತಪ್ಪು: ರೇಣುಕಾಚಾರ್ಯ