ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ (H.C Mahadevappa) ನಡುವೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ ಎಂದು ಸಂಸದ ಸುನಿಲ್ ಬೋಸ್ (Sunil Bose) ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ (Mysuru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಮುನಿಸಿನ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದರು. ಅವರದ್ದು ಸುಮಾರು 40 ವರ್ಷಗಳ ಸುದೀರ್ಘ ಸ್ನೇಹ. ಯಾವುದೋ ಒಂದು ವಿಚಾರಕ್ಕೆ ಇಬ್ಬರೂ ತಮ್ಮ ಸಂಬಂಧವನ್ನು ಬಿಟ್ಟುಕೊಡುವವರಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಕೇಂದ್ರ ಸರ್ಕಾರ ಮಾಡಬೇಕು: ಸಚಿವ ಯು.ಟಿ.ಖಾದರ್
ಮಹದೇವಪ್ಪ ಅವರಿಗೆ ವೈರಲ್ ಫೀವರ್ ಇದ್ದ ಕಾರಣ ಸಿದ್ದರಾಮಯ್ಯ ಅವರು ಕರೆದಿದ್ದ ಸಂವಿಧಾನ ಪೂರ್ವಭಾವಿ ಸಭೆಗೆ ಹಾಜರಾಗಿರಲಿಲ್ಲ. ಆದರೆ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಅವರೇ ತಿಳಿಸಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಮಹದೇವಪ್ಪ ಅವರು ತಪ್ಪದೇ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವೆ ಮುನಿಸು ಇದೆ ಎಂಬುದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯಷ್ಟೇ. ಇಬ್ಬರೂ ಪ್ರಬುದ್ಧ ರಾಜಕಾರಣ ಮಾಡಿಕೊಂಡು ಬಂದವರು. ಅವರ ತತ್ವ, ಸಿದ್ಧಾಂತಗಳು ಒಂದೇ ಆಗಿವೆ. ಇಬ್ಬರ ನಡುವಿನ ಸ್ನೇಹದಲ್ಲಿ ಬಿರುಕು ಮೂಡಲು ಸಾಧ್ಯವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಂದುಳಿದ ವರ್ಗಗಳ ಸಾಲದ ಬಡ್ಡಿ ಮನ್ನಾ, 12 ಜಿಲ್ಲೆಗಳ ಹೆದ್ದಾರಿ ಅಭಿವೃದ್ಧಿ, 1,700 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಸೇರಿ ಹಲವು ತೀರ್ಮಾನ
