ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಹೇಳಿದರು.
ನಗರದ ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಕಾಂಗ್ರೆಸ್ ಕಿತ್ತಾಟ, ಪವರ್ ಶೇರಿಂಗ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನೀವು ಒಗ್ಗಟ್ಟಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದೀರಿ, ನಮ್ಮದು ಒಗ್ಗಟ್ಟಿನ ಸರ್ಕಾರ. ನಮ್ಮಲ್ಲಿ ಒಗ್ಗಟ್ಟಿದೆ, ಏನೇ ಇದ್ದರೂ ಹೈಕಮಾಂಡ್ ಬಿಗ್‌ಬಾಸ್‌ನಿಂದ ಸಂದೇಶ ಬರುತ್ತದೆ. ಇದೆಲ್ಲಾ ಒಂದು ಗುಂಪಿನ ಮಾಧ್ಯಮಗಳ ಸೃಷ್ಟಿಯಷ್ಟೇ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳು ಜನರಲ್ಲಿ ವಿಶ್ವಾಸ ಮೂಡಿಸಿದೆ. ಆದರೆ ಬಿಜೆಪಿಯಲ್ಲಿ ಎಲ್ಲ ನಾಯಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅವರು ತಮ್ಮ ಭಿನ್ನಾಭಿಪ್ರಾಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಅವರು ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅಟ್ಯಾಕ್ ಮಾಡಲು ಆಗ್ತಿಲ್ಲ. ಹಾಗಾಗಿ ಕರ್ನಾಟಕದ ಜನರ ಮೇಲೆ ರಾಜಕೀಯ ದಾಳಿ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ
ಇಂದು (ಜ.13) ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಸಭೆಯಲ್ಲೂ ಹೈಕಮಾಂಡ್ ಅಧಿಕೃತ ಸಂದೇಶ ರವಾನಿಸುವ ಸಾಧ್ಯತೆಯಿದೆ ಎಂದು ಎಲ್ಲ ಬಣಗಳಿಗೂ ಬಿಸಿ ಮುಟ್ಟಿಸಿದರು. ಇವತ್ತಿನ ಸಭೆ ಜೈ ಬಾಪೂ, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತಾ ಸಭೆಯಾಗಲಿದೆ. ಅಮಿತ್ ಷಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ದೇಶದ ಎಸ್‌ಸಿ, ಎಸ್‌ಟಿ, ಒಬಿಸಿ ಜನರಿಗೆ ಅಪಮಾನ ಮಾಡಿದ್ದಾರೆ. ದೇಶದಲ್ಲಿ ಅಮಿತ್ ಷಾ ಅವರ ರಾಜೀನಾಮೆ ಕೇಳ್ತಿದ್ದೇವೆ, ಬೆಳಗಾವಿ ಸಮಾವೇಶದಲ್ಲೂ ಕೇಳುತ್ತಿದ್ದೇವೆ ಎಂದರು.
58 ಸಾವಿರ ಕೋಟಿ ರೂ. ಯೋಜನೆಯ ಲಾಭ ಜನತೆಗೆ ಸಿಗುತ್ತಿದೆ. ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ದೇಶದ ದೊಡ್ಡ ಯೋಜನೆಗಳು. ಇದರಿಂದ ಬಿಜೆಪಿಗೆ ಹತಾಶೆ ಶುರುವಾಗಿದೆ. ಯತ್ನಾಳ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ, ಅವರಿಗೆ ರಮೇಶ್ ಜಾರಕಿಹೊಳಿ ಸಾಥ್ ನೀಡುತ್ತಿದ್ದಾರೆ. ಬಿಜೆಪಿಯಲ್ಲಿಯೇ ಕಿತ್ತಾಟ ಜೋರಾಗಿ ನಡೆಯುತ್ತಿದೆ. ಜೆಡಿಎಸ್ ಕೂಡ ಬಿಜೆಪಿಗೆ ಬೆಂಬಲ ನೀಡಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡ್ತಿದೆ. ಅವರ ವೈಪಲ್ಯವನ್ನ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದವರಿಗೆ ಕೆರದಲ್ಲಿ ಹೊಡೀಬೇಕು: ನಿರ್ದೇಶಕ ಪ್ರೇಮ್