ನವದೆಹಲಿ: ಸಿಂಗಲ್ ಮ್ಯಾನ್ ಆರ್ಮಿ ನಾನು. ನಮ್ಮಲ್ಲಿ ಯಾವುದೇ ಬಣಗಳಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು.
ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ತಿಕ್ಕಾಟ ಇಲ್ಲ. ನಮ್ಮಲ್ಲಿ ಯಾವುದೇ ಒಳ ಬಣಗಳಿಲ್ಲ. ಇಲ್ಲಿ ಇರೋದು ಒಂದೆ, ಅದು ಕಾಂಗ್ರೆಸ್ ಬಣ. ಟಿಕೆಟ್‌ಗಾಗಿ ಪೈಪೋಟಿ ಇಲ್ಲ. ಪಕ್ಷಕ್ಕೆ ದುಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ
Advertisement
Advertisement
ಟಿಕೆಟ್ ಯಾಕೆ ವಿಳಂಬ ಎನ್ನುವುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಬಿಜೆಪಿಗೆ ತನ್ನದೇ ತಂತ್ರಗಾರಿಕೆ ಇಲ್ವಾ? ಹಾಗೆಯೇ ನಮ್ಮದೂ ತಂತ್ರಗಾರಿಕೆ ಇದೆ. ಸಂಜೆ ವೇಳೆಗೆ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ, ಹೀಗಾಗಿ ಎಲ್ಲವನ್ನು ಪರಿಗಣಿಸಬೇಕು. ಜಾತಿ ಆಧರದ ಮೇಲೆ ಪಟ್ಟಿ ನೀಡಿದ್ದೇವೆ. ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ತಿಳಿಸಿದ್ದಾರೆ.
Advertisement
ರಾಜ್ಯಸಭೆಯಿಂದ ಪ್ರಿಯಾಂಕಾ ಗಾಂಧಿ ನಾಮನಿರ್ದೇಶನ ಮಾಡುವುದು ಸುಳ್ಳು ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪರಿಷತ್ ಚುನಾವಣೆ – ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಕಾಂಗ್ರೆಸ್-ಬಿಜೆಪಿಯಲ್ಲಿ ಇನ್ನೂ ಅಂತಿಮವಾಗದ ಅಭ್ಯರ್ಥಿಗಳು
Advertisement
ಲಿಂಗಾಯತರಿಗೆ ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿ, ನಮಲ್ಲಿ ಯಾರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಹಾಗೆಯೇ ಸಿದ್ದರಾಮಯ್ಯ ಅವರನ್ನು ಎಂ.ಬಿ.ಪಾಟೀಲ್ ಭೇಟಿ ಮಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಎ ಮತ್ತು ಬಿ ಫಾರಂಗಳನ್ನು ತೆಗೆದುಕೊಳ್ಳಲು ನಾನು ದೆಹಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.