ಚಿಕ್ಕೋಡಿ: ಹುಕ್ಕೇರಿ ಮತಕ್ಷೇತ್ರದ ಶಾಸಕ ಹಾಗೂ ಸಚಿವರಾಗಿದ್ದ ಉಮೇಶ್ ಕತ್ತಿ (Umesh Katthi) ಅವರು ಅಕಾಲಿಕ ನಿಧನರಾದ ಹಿನ್ನೆಲೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹುಕ್ಕೇರಿ ಹಿರೇಮಠದ (Hukkeri Hiremath) ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು (Chandrasekhar Shivacharya Mahaswami) ತಿಳಿಸಿದರು.
Advertisement
ಹುಕ್ಕೇರಿ ಹಿರೇಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು (Mysuru) ನಂತರದಲ್ಲಿ ಹುಕ್ಕೇರಿ ಹಿರೇಮಠ ದಸರಾ ಉತ್ಸವ ಉತ್ತರ ಕರ್ನಾಟಕ (UttarKarnataka) ಭಾಗದಲ್ಲಿ ಹೆಸರಾಗಿದೆ. ಪ್ರತಿ ವರ್ಷ ವಿಭಿನ್ನವಾದ ಕಾರ್ಯಕ್ರಮದ ಮೂಲಕ ಹಿರೇಮಠದ ದಸರಾ ಉತ್ಸವ ವೈಶಿಷ್ಟ್ಯ ಹಾಗೂ ಅದ್ದೂರಿಯಾಗಿ ನಡೆದು ಬಂದಿತ್ತು. ದಿವಂಗತ ಉಮೇಶ್ ಕತ್ತಿ ಅವರು ಹಿರೇಮಠದ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿದ್ದರು. ಆದರೆ ಇದೀಗ ಅವರ ನಿಧನದ ಹಿನ್ನೆಲೆ ಸರಳವಾಗಿ ದಸರಾ ಆಚರಣೆಗೆ (Dasara celebration) ನಿರ್ಧರಿಸಲಾಗಿದೆ. ಇದನ್ನೂ ಓದಿ: ಚಾಮುಂಡಿ ತಾಯಿಯ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ ಪತ್ನಿ
Advertisement
Advertisement
ಧಾರ್ಮಿಕವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರ ನವರಾತ್ರಿ ಉತ್ಸವ ಸರಳವಾಗಿ ಜರುಗಲಿದೆ. ಶ್ರೀ ಮಠದಲ್ಲಿ 108 ವಟುಗಳು, ಪುರೋಹಿತರು ಹಾಗೂ ಭಕ್ತರಿಂದ ಸಾಮೂಹಿಕ ಇಷ್ಟಲಿಂಗ ಪೂಜೆ ಸೇರಿದಂತೆ ಹಲವು ಧಾರ್ಮಿಕ ವಿಧಿ, ವಿಧಾನಗಳು ಜರುಗಲಿವೆ. ವಿಶೇಷವಾಗಿ ಬ್ರಾಹ್ಮಣ ಹಾಗೂ ವೀರಶೈವ ಪುರೋಹಿತರು ಸೇರಿಕೊಂಡು ಒಂಭತ್ತು ದಿನಗಳ ಕಾಲ ಚಂಡಿಕಾಯಾಗ ನಡೆಸಲಿದ್ದಾರೆ ಎಂದರು. ಇದನ್ನೂ ಓದಿ: ವಿವಾಹಿತ ಬಾಯ್‌ಫ್ರೆಂಡ್‌ಗೆ ಹಾಸ್ಟೆಲ್‌ಮೇಟ್ಸ್ ಬೆತ್ತಲೆ ವೀಡಿಯೋ ಕಳಿಸಿದ BED ಪದವೀಧರೆ- ಇಬ್ಬರೂ ಅರೆಸ್ಟ್