ಬೆಂಗಳೂರು: ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಆಗಿದೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅತ್ಯಂತ ಪಾರದರ್ಶಕವಾಗಿ, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆದಿದೆ. ಆದರೆ ಉತ್ತರಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿರುವ 63 ಅಭ್ಯರ್ಥಿಗಳ ಫಲಿತಾಂಶವನ್ನು ಶಿಕ್ಷಣ ಇಲಾಖೆಯೇ ತಡೆ ಹಿಡಿದು, ನೊಟೀಸ್ ನೀಡಿದೆ. ಇದನ್ನು ಅಕ್ರಮ ಎನ್ನಲಾಗದು ಎಂದು ಸಚಿವರು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಾದಪ್ಪ- ಹುಂಡಿಯಲ್ಲಿ 2 ಕೋಟಿ 66 ಸಾವಿರ ರೂ. ಸಂಗ್ರಹ
Advertisement
Advertisement
ಪರೀಕ್ಷೆಯಲ್ಲಿ ತಪ್ಪು ಮಾಡಿರುವ ಅಭ್ಯರ್ಥಿಗಳ ಮಾಹಿತಿಯನ್ನ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಇಲಾಖಾ ವೆಬ್‍ಸೈಟ್‍ನಲ್ಲಿ ಅಭ್ಯರ್ಥಿಗಳು ವಿವರ ಮತ್ತು ಅವರು ಮಾಡಿರೋ ತಪ್ಪುಗಳ ಬಗ್ಗೆ ವಿವರವಾದ ಮಾಹಿತಿ ನೀಡಲಾಗಿದೆ. 63 ಅಭ್ಯರ್ಥಿಗಳ ಪೈಕಿ ಇಬ್ಬರನ್ನು ಅನರ್ಹ ಮಾಡಲಾಗಿದೆ. ಈಗಾಗಲೇ ಅಭ್ಯರ್ಥಿಗಳಿಗೆ ನೊಟೀಸ್ ಜಾರಿ ಮಾಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಶಿಕ್ಷಣ ಇಲಾಖೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
Advertisement
Advertisement
ಈ ಮಧ್ಯೆ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ. ಅಭ್ಯರ್ಥಿಯೊಬ್ಬ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಫೋಟೋ ತೆಗೆದಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಪ್ರಾಂಶುಪಾಲರ ಮಗ ಪತ್ರಕರ್ತರ ಸೋಗಿನಲ್ಲಿ ಬಂದು ಫೋಟೋ ತೆಗೆದಿದ್ದಾನೆ. ಆದರೆ ಈವರೆಗೂ ಬ್ಲೂ ಟೂಥ್ ಉಪಯೋಗಿಸಿ ಅಕ್ರಮ ಎಸಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪರೀಕ್ಷೆ ಅಕ್ರಮ ತಡೆಗೆ 12 ಸೆಟ್ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲಾಗಿರುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.