ಮೀಸಲಾತಿಯಲ್ಲಿ ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ- ಬೊಮ್ಮಾಯಿ

Public TV
2 Min Read
BASAVARAJ BOMMAI 1 1

ಚಿಕ್ಕಬಳ್ಳಾಪರ: ಮೀಸಲಾತಿಯಲ್ಲಿ (Reservation) ಮುಸ್ಲಿಮರಿಗೆ (Muslims) ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಎಡಬ್ಲ್ಯುಎಸ್ (AWS) ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ ಶೇ.10ರಷ್ಟು ಮೀಸಲಾತಿಯಿದೆ. ನಮ್ಮ ಸಂವಿಧಾನದಲ್ಲಿ ಧಾರ್ಮಿಕ ಆಧಾರದಲ್ಲಿ ಮೀಸಲಾತಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಚಿಕ್ಕಬಳ್ಳಾಪುರದ (Chikkaballapura) ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್‌ನವರಿಗೆ (Congress) ಸಹಿಸಲಾಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ. ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಹೇಳಲಿ. ನಾವು ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬಿಜೆಪಿ ಪಕ್ಷವು ಜನರಿಗೆ ಟೊಳ್ಳು ಭರವಸೆ ನೀಡಿಲ್ಲ- ಡಾ.ಕೆ.ಸುಧಾಕರ್ 

BASAVARAJ BOMMAI K SUDHAKAR 1

ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ. ಇದರಿಂದ ನಮ್ಮ ಆತ್ಮವಿಶ್ವಾಸ ಹೆಚ್ಚಾಗಿದೆ. ಅಮಿತ್ ಶಾ (Amit Shah) ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ (K.Sudhakar) ಅವರು ಪ್ರಾಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯವರೇ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡೋಕೆ ಒದ್ದಾಡ್ತಿದ್ದಾರೆ, ಇನ್ನೂ ನಮ್ದೆನ್ರೀ; ಹೆಚ್.ಡಿ.ರೇವಣ್ಣ

ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು (Medical College) ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳೀಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜುಗಳನ್ನು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗಾಯಕನಿಂದಲೇ ನಟಿ ಆಕಾಂಕ್ಷ ಕೊಲೆ : ತಾಯಿಯ ಗಂಭೀರ ಆರೋಪ 

BASAVARAJ BOMMAI 2 1

ನಂದಿಬೆಟ್ಟಕ್ಕೆ (Nandi Hills) ರೋಪ್ ವೇ ಆಗಬೇಕೆಂಬ ದಿವಂಗತ ನಟ ಶಂಕರನಾಗ್ (Shankar Nag) ಅವರು ಕಂಡ ಕನಸು ಈಗ ನನಸಾಗುತ್ತಿದೆ. ರೋಪ್ ವೇ ಮಾಡಿದರೆ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕೂಲವಾಗುತ್ತದೆ. ಈ ಭಾಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಗ್ಯಾಂಗ್‍ಸ್ಟರ್ ಅತೀಕ್‍ನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಹಸು ಡಿಕ್ಕಿ

Share This Article