ಬೆಂಗಳೂರು: ರಾಜ್ಯದಲ್ಲಿ ನಡೆಯಬೇಕಿದ್ದ ಕರ್ನಾಟಕ ಬಂದ್ ಹಿಂಪಡೆದ ಕನ್ನಡಪರ ಸಂಘಟನೆಗಳು ಬದಲಾಗಿ ಇಂದು ಬೃಹತ್ ರ್‍ಯಾಲಿ ನಡೆಸಲಿವೆ.
ರಾಜ್ಯದಲ್ಲಿ ಎಂಇಎಸ್ ನಿಷೇಧಗೊಳಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದ್ದರು. ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದರು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಂಇಎಸ್ ನಿಷೇಧಗೊಳಿಸುವುದಾಗಿ ಭರವಸೆ ನೀಡಿರುವುದರಿಂದ ಕನ್ನಡಪರ ಸಂಘಟನೆಗಳು ಬಂದ್ ಕರೆಯನ್ನು ಹಿಂಪಡೆದಿದೆ. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್
Advertisement
Advertisement
ಗುರುವಾರ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು. ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.
Advertisement
Advertisement
ಇಂದು ಕರ್ನಾಟಕ ಬಂದ್ ಇದೆ ಎಂದು ಗೊಂದಲಗೊಂಡಿದ್ದ ಜನರಿಗೆ ಬಂದ್ ಇಲ್ಲ ಎಂಬ ವಿಚಾರ ಇದೀಗ ರಿಲೀಫ್ ನೀಡಿದೆ. ಅಲ್ಲದೇ ರಾಜ್ಯದಲ್ಲಿ ಎಂದಿನಂತೆ ಬಸ್ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ವರುಣನ ಆರ್ಭಟಕ್ಕೆ 3 ಬಲಿ – ರಾಜಧಾನಿ ಜಲಾವೃತ
ರಾಜ್ಯದಲ್ಲಿ ಬಂದ್ ಹಿಂಪಡೆದ ಕನ್ನಡ ಸಂಘಟನೆಗಳು ಇಂದು ಬೆಳಗ್ಗೆ 10.30ಕ್ಕೆ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಬೃಹತ್ ರ್‍ಯಾಲಿ ನಡೆಸಲಿದೆ. ಮೈಸೂರು ಬ್ಯಾಂಕ್ ಸಿಗ್ನಲ್ ಮೂಲಕ ತೆರಳಲಿರುವ ಈ ರ್‍ಯಾಲಿಯಲ್ಲಿ ಸುಮಾರು 500 ಮಂದಿ ಭಾಗಿಯಾಗುವ ನಿರೀಕ್ಷೆಯಿದೆ ಮತ್ತು ಜನವರಿ 22ರೊಳಗೆ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು. ಇಲ್ಲವಾದರಲ್ಲಿ ಜನವರಿ 22ಕ್ಕೆ ಮತ್ತೆ ಬಂದ್ ಮಾಡುವುದಾಗಿ ಕನ್ನಡ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.