ರಾಮನಗರ: ಶಕ್ತಿ ಯೋಜನೆಯಿಂದ (Shakti Scheme) ಯಾವುದೇ ನಷ್ಟವಾಗಿಲ್ಲ. ಶಕ್ತಿ ಯೋಜನೆಯಿಂದ ಬರಬೇಕಾದ ಹಣ ಸಾರಿಗೆ ಇಲಾಖೆಗೆ ಬಂದಿದೆ ಎಂದು ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.
ರಾಮನಗರದಲ್ಲಿ (Ramanagara) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 8.8 ಕೋಟಿಗೂ ಹೆಚ್ಚು ಹಣ ಸಾರಿಗೆ ಇಲಾಖೆಗೆ ಬಂದಿದೆ. ಕೆಎಸ್‌ಆರ್‌ಟಿಸಿಯಲ್ಲಿ ಬಿಜೆಪಿ ಸರ್ಕಾರ ಇದ್ದಾಗ 5,900 ಕೋಟಿ ಸಾಲ ಇತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 10 ಸಾವಿರ ಮಂದಿಯನ್ನು ಕೆಎಸ್‌ಆರ್‌ಟಿಸಿಗೆ ನೇಮಕ ಮಾಡಿಕೊಂಡಿದ್ದೇವೆ ಎಂದರು. ಇದನ್ನೂ ಓದಿ: ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ: ಪರಮೇಶ್ವರ್
Advertisement
Advertisement
ಈಗಾಗಲೇ ಡಿ.ಕೆ. ಶಿವಕುಮಾರ್ ಹಾಗೂ ಸುರೇಶ್ ಜಿಲ್ಲೆಯನ್ನ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಮನಗರ ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಜಿಲ್ಲೆಗೆ ಆಗಬೇಕಿರುವ ಅಭಿವೃದ್ಧಿ ಪಟ್ಟಿಯನ್ನು ಡಿಸಿ ಅವರು ನೀಡುತ್ತಾರೆ. ಫೆ. 4 ರಂದು ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ
Advertisement
ರಾಮನಗರ ಶಾಸಕರ ವಿರುದ್ಧ ಭೂ ಕಬಳಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ನೋಟಿಸ್ ಬಂದ ಮೇಲೆ ಶಾಸಕರು ದಾಖಲೆ ಕೊಡುತ್ತಾರೆ. ಲೋಕಾಯುಕ್ತ ತನಿಖೆ ಮಾಡಲಿ, ನೋಡೊಣ. ಇದಕ್ಕೆ ಸಂಬಂಧ ಪಟ್ಟ ಟ್ರಿಬಿನಲ್ ಕೂಡ ರೆಡಿಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಒಂದು ತಿಂಗಳ ರೆಸ್ಟ್ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿ: ಶಿವಣ್ಣ
Advertisement
ಶ್ರೀರಾಮುಲು ಜನಾರ್ದನ ರೆಡ್ಡಿ ಫೈಟ್ ವಿಚಾರವಾಗಿ ಮಾತನಾಡಿದ ಅವರು, ಶ್ರೀರಾಮುಲು ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದವರು. ಶ್ರೀರಾಮುಲು, ಜನಾರ್ಧನ ರೆಡ್ಡಿ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಸಿಎಂ ಕೂಡ ಯಾರನ್ನೂ ಕರೆಯುವುದಿಲ್ಲ ಎಂದಿದ್ದಾರೆ. ಆದರೆ ನಮ್ಮ ಪಕ್ಷಕ್ಕೆ ಬರುವುದಾದರೆ ಬರಬಹುದು ಎಂದರು. ಇದನ್ನೂ ಓದಿ: ದಾವಣಗೆರೆ | ಮೈಕ್ರೋ ಫೈನಾನ್ಸ್‌ನಿಂದ ಮಹಿಳೆಗೆ ಕಿರುಕುಳ
ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಚಿವ ಸ್ಥಾನ ಎಲ್ಲರಿಗೂ ಸಿಗುವುದಿಲ್ಲ. ಆದರೆ ಆಸೆ ಇಟ್ಟುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರನ್ನೇ ಕೇಳಿ ಎಂದು ನುಡಿದರು. ಇದನ್ನೂ ಓದಿ: ಶಿವಣ್ಣ ನಮ್ಮ ರಾಜ್ಯದ ಆಸ್ತಿ: ಕೃಷ್ಣ ಬೈರೇಗೌಡ