ಬೆಂಗಳೂರು: ಏನ್ರೀ ತಪ್ಪು? ಯಾವ್ ಮಹಿಳೆಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಮಾನ ಮಾಡಿಲ್ಲ. ಹೀಗಿರುವಾಗ ಅವರು ಯಾಕೆ ಕ್ಷಮೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿ ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಮಹಿಳೆಗೆ ತಾಯಿ ಅಂತ ಕುಮಾರಸ್ವಾಮಿ ಅವರು ಪದ ಬಳಸಿಯೇ ಮಾತನಾಡಿದ್ದಾರೆ. ಆದರೆ ಅವರ ಹೇಳಿಕೆಯನ್ನು ತಿರುಚಲಾಗಿದೆ. ಇದು ನಾಲ್ಕು ಕ್ಷೇತ್ರಗಳಲ್ಲಿ ಸೋತಿರುವ ಬಿಜೆಪಿ ಷಡ್ಯಂತ್ರ. ಅವರಿಗೆ ಮಾನ ಮರ್ಯಾದೆ ಇದ್ದರೆ, ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ಅನುದಾನ ತರುವ ಕೆಲಸ ಮಾಡಲಿ ಎಂದು ಆರೋಪಿಸಿದರು.
Advertisement
ಬೆಳಗ್ಗೆಯಿಂದ ಚಾನೆಲ್‍ಗಳಲ್ಲಿ ಮೈತ್ರಿ ಸರ್ಕಾರವನ್ನು ಹಾಕೊಂಡು ಕುಟ್ಟಿದ್ದೀರಿ. ನಾವು ಯಾರಿಗೂ ಹೆದರಿಕೊಳ್ಳಲ್ಲ ಎಂದ ಸಚಿವರು, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಜೀನಾಮೆ ನೀಡುವುದಿಲ್ಲ. ನನ್ನ ಬಳಿ ಯಾವುದೇ ಸಕ್ಕರೆ ಕಾರ್ಖಾನೆ ಇಲ್ಲ. ಒಂದು ವೇಳೆ ಇದ್ದಿದ್ದರೆ ಉಚಿತವಾಗಿ ಬರೆದುಕೊಡುತ್ತಿದ್ದೆ. ಯಾವುದೇ ಸಚಿವರು ರೈತರ ಹಣ ಬಾಕಿ ಉಳಿಸಿಕೊಂಡಿಲ್ಲ. ಹಾಗೆನಾದರೂ ಇದ್ದರೆ ನಾಳೆ ಚರ್ಚಿಸಿ ಬಾಕಿ ವಾಪಸ್ ಕೊಡಿಸ್ತೀವಿ ಎಂದು ತಿಳಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews