-ಯತ್ನಾಳ್ ಹಿರಿಯರು, ಅವರು ಸ್ವತಂತ್ರರಿದ್ದಾರೆ ಎಂದು ವ್ಯಂಗ್ಯ
ಬೆಂಗಳೂರು: ರಾಜ್ಯದ ಭಂಡ ಸರ್ಕಾರ ಹಾಗೂ ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ. ಇದು ಪ್ರಾರಂಭವಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ. ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‌ಗೆ ಮೊನ್ನೆ ರಾತ್ರಿ 2 ರೂ. ಹೆಚ್ಚಿಸಿದ ದುಷ್ಟರಿವರು. ಇದು ಅಧಿಕಾರದ ಮದ ಎಂದು ಖಂಡಿಸಿದರು.ಇದನ್ನೂ ಓದಿ: ಜನವಿರೋಧಿ ನೀತಿ ವಿರುದ್ಧ ಬಿಜೆಪಿ ನಿರಂತರ ಹೋರಾಟ: ಯಡಿಯೂರಪ್ಪ
ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ತಾಯಂದಿರೂ ಪಾಲ್ಗೊಂಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ನಮ್ಮ ಹೋರಾಟದ ಕಿಚ್ಚು ಹಚ್ಚಿದಂತಾಗಿದೆ. ಒಂದು ಪ್ರೇರಣೆ, ಶಕ್ತಿ ಲಭಿಸಿದೆ. ಇದೇ 5ರಂದು ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಇದೆ. ಏ.7ರಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ನಮ್ಮ ಹೋರಾಟ ಮುಂದಕ್ಕೆ ಸಾಗುತ್ತದೆ ಎಂದರು.
ಯತ್ನಾಳ್ (Basangouda Patil Yatnal) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಹಿರಿಯರಿದ್ದಾರೆ. ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಸ್ವತಂತ್ರರಿದ್ದಾರೆ ಎಂದು ವ್ಯಂಗ್ಯ ನುಡಿದರು.ಇದನ್ನೂ ಓದಿ: ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತಿ ಆಗೋವರೆಗೂ ನಾನು ಬಿಜೆಪಿಗೆ ವಾಪಸ್ ಆಗಲ್ಲ – ಯತ್ನಾಳ್ ಶಪಥ