Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನದಲ್ಲಿ ವಕ್ಫ್‌ ಕಾನೂನಿಗೆ ಸ್ಥಾನವಿಲ್ಲ: ಕಾಂಗ್ರೆಸ್‌ ವಿರುದ್ಧ ಮೋದಿ ಗುಡುಗು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂವಿಧಾನದಲ್ಲಿ ವಕ್ಫ್‌ ಕಾನೂನಿಗೆ ಸ್ಥಾನವಿಲ್ಲ: ಕಾಂಗ್ರೆಸ್‌ ವಿರುದ್ಧ ಮೋದಿ ಗುಡುಗು

Latest

ಸಂವಿಧಾನದಲ್ಲಿ ವಕ್ಫ್‌ ಕಾನೂನಿಗೆ ಸ್ಥಾನವಿಲ್ಲ: ಕಾಂಗ್ರೆಸ್‌ ವಿರುದ್ಧ ಮೋದಿ ಗುಡುಗು

Public TV
Last updated: November 23, 2024 10:00 pm
Public TV
Share
3 Min Read
narendra modi 1
SHARE

– ಮಹಾರಾಷ್ಟ್ರ ಚುನಾವಣೆಯು ‘ಇಂಡಿಯಾ’-ಅಘಾಡಿ ದ್ವಂದ್ವ ಮುಖ ಬಯಲು ಮಾಡಿದೆ
– ಕಾಂಗ್ರೆಸ್‌ನ ನಗರ ನಕ್ಸಲಿಸಂ ಭಾರತಕ್ಕೆ ಹೊಸ ಸವಾಲಾಗಿದೆ

ನವದೆಹಲಿ: ಸಂವಿಧಾನದಲ್ಲಿ ವಕ್ಫ್‌ ಕಾನೂನಿಗೆ ಸ್ಥಾನವಿಲ್ಲ. ಆದರೆ, ಕಾಂಗ್ರೆಸ್‌ ತನ್ನ ವೋಟ್‌ಬ್ಯಾಂಕ್‌ ಹೆಚ್ಚಿಸಲು ಹೀಗೆ ಮಾಡಿದೆ ಎಂದು ಕರ್ನಾಟಕದ ವಕ್ಫ್‌ ವಿವಾದ ಉಲ್ಲೇಖಿಸಿ ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಹಾರಾಷ್ಟ್ರ ಜಯಭೇರಿ ಹಿನ್ನೆಲೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕಾನೂನು ಮಾಡಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಬಗ್ಗೆಯೂ ಅವರು ತಲೆಕೆಡಿಸಿಕೊಂಡಿಲ್ಲ. ಇದಕ್ಕೆ ಉದಾಹರಣೆ ವಕ್ಫ್ ಬೋರ್ಡ್. ದೆಹಲಿಯ ಜನರು ಆಶ್ಚರ್ಯ ಪಡುತ್ತಾರೆ. 2014 ರಲ್ಲಿ ಸರ್ಕಾರವನ್ನು ತೊರೆಯುವ ಮೊದಲು, ಈ ಜನರು ದೆಹಲಿ ಮತ್ತು ಸುತ್ತಮುತ್ತಲಿನ ಅನೇಕ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಹಸ್ತಾಂತರಿಸಿದ್ದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದಲ್ಲಿ ವಕ್ಫ್ ಕಾನೂನಿಗೆ ಸ್ಥಾನವಿಲ್ಲ. ಆದರೆ, ಕಾಂಗ್ರೆಸ್ ತನ್ನ ವೋಟ್‌ಬ್ಯಾಂಕ್ ಹೆಚ್ಚಿಸಲು ಹೀಗೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಅಧಿಕಾರವಿಲ್ಲದೇ ಕಾಂಗ್ರೆಸ್ ಕುಟುಂಬ ಬದುಕಲು ಸಾಧ್ಯವಿಲ್ಲ. ಚುನಾವಣೆ ಗೆಲ್ಲಲು ಏನು ಬೇಕಾದರೂ ಮಾಡಬಹುದು. ಇಂದು, ಕಾಂಗ್ರೆಸ್‌ನ ನಗರ ನಕ್ಸಲಿಸಂ ಭಾರತಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಅರ್ಬನ್ ನಕ್ಸಲೀಯರ ರಿಮೋಟ್ ಕಂಟ್ರೋಲ್ ದೇಶದ ಹೊರಗಿದ್ದು, ಈ ಅರ್ಬನ್ ನಕ್ಸಲಿಸಂ ಬಗ್ಗೆ ಎಲ್ಲರೂ ಬಹಳ ಎಚ್ಚರಿಕೆ ವಹಿಸಬೇಕಿದೆ. ಇಂದು ದೇಶದ ಯುವಜನತೆ, ಪ್ರತಿಯೊಬ್ಬರೂ ಕಾಂಗ್ರೆಸ್‌ನ ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಮೋದಿ ಎಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಈಗ ದೇಶದ ರಾಜಕೀಯದಲ್ಲಿ ‘ಪರಜೀವಿ’ ಎನಿಸಿಕೊಂಡಿದೆ. ಸ್ವಂತವಾಗಿ ಗುಂಪು ಕಟ್ಟಿಕೊಳ್ಳುವುದು ಅವರಿಗೆ ಕಷ್ಟವಾಗುತ್ತಿದೆ. ಆಂಧ್ರಪ್ರದೇಶ, ಸಿಕ್ಕಿಂ, ಹರಿಯಾಣ ಮತ್ತು ಇಂದು ಮಹಾರಾಷ್ಟ್ರದಲ್ಲಿ ಅವರು ನಾಶವಾಗಿದ್ದಾರೆ. ಕಾಂಗ್ರೆಸ್ ಒಡೆದು ಆಳುವ ರಾಜಕಾರಣ ವಿಫಲವಾಗಿದೆ. ಆದರೆ, ಕಾಂಗ್ರೆಸ್‌ನ ದುರಹಂಕಾರ ನೋಡಿ. ಕಾಂಗ್ರೆಸ್ ತನ್ನ ದೋಣಿ ಮಾತ್ರವಲ್ಲದೆ ತನ್ನ ಮಿತ್ರಪಕ್ಷಗಳ ದೋಣಿಯನ್ನೂ ಮುಳುಗಿಸುತ್ತಿದೆ. ಮಹಾರಾಷ್ಟ್ರದಲ್ಲಿ ನಾವು ಅದನ್ನೇ ನೋಡಿದ್ದೇವೆ ಎಂದು ಟಾಂಗ್‌ ಕೊಟ್ಟರು.

ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲದಲ್ಲಿ ಕಾಂಗ್ರೆಸ್ ಸರ್ಕಾರ ಹೇಗೆ ಜನರಿಗೆ ದ್ರೋಹ ಮಾಡುತ್ತಿದೆ ಎಂಬುದನ್ನು ಮಹಾರಾಷ್ಟ್ರದ ಜನರು ನೋಡಿದ್ದಾರೆ. ಇದನ್ನು ನೀವು ಪಂಜಾಬಿನಲ್ಲೂ ನೋಡುತ್ತೀರಿ. ಇಂದು ಮಹಾರಾಷ್ಟ್ರದ ಜನಾದೇಶದ ಮತ್ತೊಂದು ಸಂದೇಶವಿದೆ. ಇಡೀ ದೇಶದಲ್ಲಿ ಒಂದೇ ಒಂದು ಸಂವಿಧಾನ ಕೆಲಸ ಮಾಡುತ್ತದೆ. ಅದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ, ಭಾರತದ ಸಂವಿಧಾನ. ದೇಶದಲ್ಲಿ ಎರಡು ಸಂವಿಧಾನಗಳ ಬಗ್ಗೆ ಯಾರೇ ಮಾತನಾಡಿದರೂ ದೇಶ ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 370 ನೇ ವಿಧಿಯ ಗೋಡೆಯನ್ನು ನಿರ್ಮಿಸಲು ಪ್ರಯತ್ನಿಸಿದವು. ಇದು ಕೆಲಸ ಮಾಡುವುದಿಲ್ಲ ಎಂದು ಮಹಾರಾಷ್ಟ್ರ ಅವರಿಗೆ ಸ್ಪಷ್ಟವಾಗಿ ಹೇಳಿದೆ. ಈಗ ವಿಶ್ವದ ಯಾವುದೇ ಶಕ್ತಿಯು 370 ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ ಚುನಾವಣೆಯು ‘ಇಂಡಿಯಾ’-ಅಘಾಡಿಯ ದ್ವಂದ್ವ ಮುಖವನ್ನು ಬಯಲು ಮಾಡಿದೆ. ಕಾಂಗ್ರೆಸ್ ನಾಯಕತ್ವವು ದೇಶಾದ್ಯಂತ ವೀರ ಸಾವರ್ಕರ್ ಅವರನ್ನು ನಿರಂತರವಾಗಿ ಅವಮಾನಿಸಿದೆ. ಮಹಾರಾಷ್ಟ್ರದಲ್ಲಿ ಮತ ಪಡೆಯಲು, ಈ ಜನರು ಅವರನ್ನು ನಿಂದಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದರು. ಆದರೆ ಅವರು ಸಾವರ್ಕರ್ ಅವರ ತ್ಯಾಗದ ಬಗ್ಗೆ ಒಮ್ಮೆಯೂ ಸತ್ಯವನ್ನು ಮಾತನಾಡಿಲ್ಲ. ಇದು ಅವರ ಎರಡು ಮುಖವನ್ನು ತೋರಿಸುತ್ತದೆ. ವೀರ ಸಾವರ್ಕರ್ ಅವರ ಮಾನಹಾನಿ ಮಾಡುವುದು ಅವರ ಏಕೈಕ ಉದ್ದೇಶವಾಗಿದೆ ಎಂದು ಎಂವಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡರು.

ಈ ಬಾರಿ ಮಹಾರಾಷ್ಟ್ರ ಎಲ್ಲಾ ದಾಖಲೆಗಳನ್ನು ಮುರಿದಿದೆ. ಕಳೆದ 50 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಚುನಾವಣಾ ಪೂರ್ವ ಮೈತ್ರಿಕೂಟಕ್ಕೆ ದೊರೆತ ಅತಿ ದೊಡ್ಡ ಗೆಲುವು ಇದಾಗಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮಹಾರಾಷ್ಟ್ರವು ಸತತ ಮೂರನೇ ಬಾರಿ ಆಶೀರ್ವಾದ ಮಾಡಿದೆ. ಮಹಾರಾಷ್ಟ್ರದಲ್ಲಿ ಮೂರನೇ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗಿಂತ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ. ಬಿಜೆಪಿಗೆ ಸತತ ಮೂರು ಬಾರಿ ಜನಾದೇಶ ನೀಡಿದ ದೇಶದ ಆರನೇ ರಾಜ್ಯ ಮಹಾರಾಷ್ಟ್ರ ಎಂದು ಮೋದಿ ಬಣ್ಣಿಸಿದರು.

TAGGED:maharashtraMahayutinarendra modiನರೇಂದ್ರ ಮೋದಿಮಹಾಯುತಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?