ಬೆಂಗಳೂರು: ಐಎಂಎ ಹಗರಣದಲ್ಲಿ ಯಾರನ್ನೂ ರಕ್ಷಣೆ ಮಾಡೋ ಕೆಲಸ ಸರ್ಕಾರ ಮಾಡುವುದಿಲ್ಲ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಇಂದು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡೋದಿಲ್ಲ ಅಂತಾ ಸ್ಪಷ್ಟಪಡಿಸಿದರು.
Advertisement
ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಐಎಂಎ ಪ್ರಕರಣದ ಕುರಿತು ಪ್ರಶ್ನೆ ಮಾಡಿದರು. ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ಹೆಗ್ಗಣಗಳನ್ನು ಸ್ಪೀಕರ್ ಕಳ್ಸಿದ್ದಾರೆ ಅಂತಾ ಹೇಳ್ಬೇಡಿ: ಸಿದ್ದರಾಮಯ್ಯ ಕಾಲೆಳೆದ ಸ್ಪೀಕರ್!
Advertisement
Advertisement
ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಯಾರೇ ಪ್ರಕರಣದಲ್ಲಿ ಇದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡಿದ್ದೇವೆ. ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮೇಲೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಪ್ರಾಸಿಕ್ಯೂಷನ್ ಗೂ ಅನುಮತಿ ನೀಡಲಾಗಿದೆ. ಅದರ ವಿರುದ್ಧ ಹೇಮಂತ್ ನಿಂಬಾಳ್ಕರ್ ಕೋರ್ಟ್‍ನಿಂದ ಸ್ಟೇ ತಂದಿದ್ದಾರೆ. ಸಿಬಿಐ ತನಿಖೆ ನಡೆಸುತ್ತಿದ್ದು ಸುಪ್ರಿಂ ಕೋರ್ಟ್‍ಗೆ ಹೋಗಿದೆ. ಅಲ್ಲಿಂದ ತೀರ್ಪು ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಅಂತ ತಿಳಿಸಿದರು.
Advertisement
ಇನ್ನೊಬ್ಬ ಐಪಿಎಸ್ ಅಧಿಕಾರಿ ಅಜಯ್ ಹಿಲರಿ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಬಗ್ಗೆಯೂ ಸರ್ಕಾರ ಕ್ರಮವಹಿಸಿದೆ. ಯಾರೇ ಹಗರಣದಲ್ಲಿ ಭಾಗಿಯಾಗಿದ್ದರೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಅಂತ ಭರವಸೆ ನೀಡಿದರು. ಇದನ್ನೂ ಓದಿ: ಈಶ್ವರಪ್ಪ, ಮುತಾಲಿಕ್ ದೇಶದ ತಾಲಿಬಾನಿಗಳು: ಧ್ರುವನಾರಾಯಣ್