Wednesday, 19th June 2019

ಬಿಎಸ್‍ಪಿಯ ಶಿಸ್ತಿನ ಸಿಪಾಯಿ, ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ: ಎನ್. ಮಹೇಶ್

ಚಾಮರಾಜನಗರ: ನಾನು ಬಹುಜನ ಸಮಾಜವಾದಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೊಳ್ಳೆಗಾಲ ಶಾಸಕ ಹಾಗು ಬಿಎಸ್‍ಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ಎನ್. ಮಹೇಶ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೀಗ ತಾಂತ್ರಿಕವಾಗಿ ಸಮ್ಮಿಶ್ರ ಸರ್ಕಾರದ ಭಾಗವಾಗಿಲ್ಲ, ವಿರೋಧ ಪಕ್ಷದಲ್ಲಿದ್ದೇನೆ. ನಮ್ಮ ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಹೇಳಿದರೆ ಖಂಡಿತ ಬಿಜೆಪಿಗೆ ಬೆಂಬಲ ನೀಡುತ್ತೇನೆ. ನಾನು ಬಿಎಸ್‍ಪಿಯ ಕಟ್ಟಾ ಕಾರ್ಯಕರ್ತ, ಬಿಎಸ್‍ಪಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಬಿಎಸ್‍ಪಿ ಪಕ್ಷ ತೊರೆದು ಬಿಜೆಪಿಗೆ ಹೋಗೋದು ಕೇವಲ ವದಂತಿಯಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ

ಈ ಮೂಲಕ ಎನ್. ಮಹೇಶ್ ಮುಂದಿನ ದಿನಗಳಲ್ಲಿ ಬಿಎಸ್‍ಪಿ ಪಕ್ಷ ಬಿಜೆಪಿಗೆ ಬೆಂಬಲ ನೀಡಲಿದೆ ಎಂಬುದರ ಸುಳಿವನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *