ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ (Hampi) ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.ಇದನ್ನೂ ಓದಿ: ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ – 3 ಮಂದಿ ಸಾವು
ಹೊಸ ವರ್ಷಾಚರಣೆ ಹಿನ್ನೆಲೆ ಇಂದು (ಡಿ.31) ಹಾಗೂ ನಾಳೆ (ಜ.01) ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಹಂಪಿ ಭೇಟಿಗೆ ಬರುವ ಪ್ರವಾಸಿಗರು, ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ.
ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ.ಇದನ್ನೂ ಓದಿ: ತಮಿಳುನಾಡು | ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗ್ಲಾಸ್ ಬ್ರಿಡ್ಜ್ ಉದ್ಘಾಟನೆ