ಉಡುಪಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನು ಚೌಕಟ್ಟಿನಲ್ಲಿ ಎಲ್ಲಾ ಆಯಾಮದ ತನಿಖೆ ಆಗುತ್ತದೆ. ಈ ದೇಶದಲ್ಲಿ ರಾಷ್ಟ್ರಪತಿ, ಸೆಲೆಬ್ರಿಟಿ, ಪಂಚರ್ ಹಾಕುವವನಿಗೂ ಒಂದೇ ಕಾನೂನು. ಪ್ರಸಿದ್ದರು ದೊಡ್ಡವರು ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.
ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ (Actor Darshan) ಕುರಿತಾಗಿ ಬುಧವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಎಷ್ಟೇ ದೊಡ್ಡವರಿದ್ದರೂ ಶಿಕ್ಷೆಯಾಗುತ್ತದೆ. ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ. ಈ ಸರ್ಕಾರ ಯಾವ ಭಾಗದ, ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಯಾದ ಶೆಡ್‌ನಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು!
ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗಿಯಾಗುತ್ತದೆ. ಸಂತ್ರಸ್ತ ಕುಟುಂಬದ ಜೊತೆ ಸರ್ಕಾರ ಆರ್ಥಿಕವಾಗಿಯೂ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನುಡಿದರು. ಕೊಲೆ ಕೃತ್ಯದ ಸಮಗ್ರ ತನಿಖೆ ಆಗುತ್ತದೆ. ನೊಂದ ಕುಟುಂಬಕ್ಕೆ ನ್ಯಾಯ ನೀಡುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತದೆ ಎಂದು ಭರವಸೆ ಮೂಡಿಸಿದರು.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು. ಎಲ್ಲರನ್ನೂ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ದರ್ಶನ್ ನನ್ನ ಸ್ನೇಹಿತರು – ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರೋದು ಶಾಕ್ ಆಗ್ತಿದೆ: ದರ್ಶನ್ ಪುಟ್ಟಣ್ಣಯ್ಯ