– ಗೃಹ ಬಳಕೆ LPG ಸಮಸ್ಯೆಗೆ ಸಹಾಯವಾಣಿ ಓಪನ್
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ (Domestic LPG Customers) ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅನಿಲದ ಕೊರತೆ ಇಲ್ಲ. ಹೀಗಾಗಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದ್ದಲ್ಲಿ ಸಹಾಯವಾಣಿ: 9611404384 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ
ಇರಾನ್, ಇಸ್ರೇಲ್ ಹಾಗೂ ಅಮೆರಿಕ ನಡುವೆ ಯುದ್ಧ ನಡೆಯುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ಪರಿಣಾಮ ಭಾರತಕ್ಕೂ ತಟ್ಟಿದ್ದು, ಕಚ್ಚಾತೈಲ, ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹೋಟೆಲ್‌ಗಳು ಗ್ಯಾಸ್ ಕೊರತೆಯನ್ನು ಅನುಭವಿಸಿವೆ. ಸಮಸ್ಯೆ ಹೀಗೆಯೇ ಮುಂದುವರಿದರೆ ಹೋಟೆಲ್‌ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಸಮಸ್ಯೆ ಹೇಳಿಕೊಂಡಿದ್ದರು. ಇತ್ತ ಗೃಹಬಳಕೆ ಎಲ್‌ಪಿಜಿ ಕೊರತೆ ಉಂಟಾಗಬಹುದೆಂದು ಜನರು ಹೆಚ್ಚುವರಿ ಸಿಲಿಂಡರ್ ದಾಸ್ತಾನಿಗೆ ಮುಗಿಬಿದ್ದಿದ್ದರು.

