ಬೆಂಗಳೂರು: ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸದ್ಯ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ. ಅದರೆ ಕೃತಕ ಅಭಾವ ಸೃಷ್ಟಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹೊಸ ಮನೆ ಖರೀದಿಸಿದ ನಟಿ ವೈಷ್ಣವಿ ಗೌಡ – ಅಗ್ನಿಸಾಕ್ಷಿ ಚೆಲುವೆಯ ಗೃಹ ಪ್ರವೇಶಕ್ಕೆ ದೊಡ್ಮನೆ ಮಂದಿ ಸಾಕ್ಷಿ
Advertisement
Advertisement
ರಾಜ್ಯದಲ್ಲಿ 2022-23ರಲ್ಲಿ 82.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದುವರೆಗೂ ಸುಮಾರು 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆ ಆಗಿದೆ. ರಾಜ್ಯದಲ್ಲಿ 5.30 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಬೇಡಿಕೆಗೆ 8.65 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ರಾಜ್ಯಾದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಮೇ 9ರವರೆಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ 3505.8 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 2185.8 ಕ್ವಿಂಟಾಲ್‍ಗಳಷ್ಟು ಬಿತ್ತನೆ ಬೀಜ ಇನ್ನು ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.
Advertisement
Advertisement
ರಾಜ್ಯದಲ್ಲಿ ರಸಗೊಬ್ಬರದ ಕೊರತೆಯೂ ಇಲ್ಲ. ಈವರೆಗೂ 2.7 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟ ಮಾಡಲಾಗಿದೆ. ಉಳಿದಂತೆ 7.15 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ನಮ್ಮ ಬಳಿ ಇದೆ ಅಂತ ಮಾಹಿತಿ ನೀಡಿದ್ದಾರೆ. ಡಿಎಪಿ 1.02 ಲಕ್ಷ ಮೆಟ್ರಿಕ್ ಟನ್, ಎಂ.ಇ.ಪಿ 0.20 ಲಕ್ಷ ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 2.48ಲಕ್ಷ ಮೆಟ್ರಿಕ್ ಟನ್ ಹಾಗೂ ಯೂರಿಯಾ 3.45 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಇದೆ. ಇದನ್ನು ಮೀರಿ ಯಾರಾದರೂ ಕೃತಕ ಅಭಾವ ಸೃಷ್ಟಿಸಿದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: 10 ಲಕ್ಷ ನಿರಾಶ್ರಿತರು ಟರ್ಕಿಯಿಂದ ಸಿರಿಯಾಕ್ಕೆ ವಾಪಸ್ – ಎಡೋರ್ಗನ್