ಮೈಸೂರು: ನೀವು ತಿನ್ನುತ್ತಿರುವ ಸೂರ್ಯಕಾಂತಿ, ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿ ಆಗಬೇಕಿದೆ. ಶೇಕಡ 70ರಷ್ಟು ಎಣ್ಣೆ ವಿದೇಶದಿಂದ ಆಮದಾಗುತ್ತದೆ. ಮಲೇಷಿಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್ ಆಯಿಲ್ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನರಿ ಮಾಡಿ ಬೇರೆ, ಬೇರೆ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮಳೆ ರೌಂಡ್ಸ್ ಬಿಟ್ಟು ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ ಸಿಎಂ
Advertisement
Advertisement
ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಖಾದ್ಯ ತೈಲದ ವಿಚಾರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ