ರಾಮನಗರ: ಹೆದ್ದಾರಿಗಳಿಗೆ (National Highway) ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗಳಿಗೆ ನಂಬರ್ ಅಷ್ಟೇ ಕೊಡೋದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದರು.
ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ
Advertisement
Assessed the Bengaluru – Mysuru National Highway work which is part of our Greenfield Corridors project with Karnataka PWD Minister Shri @CCPatilBJP Ji and Mysuru MP Shri @mepratap Ji. #PragatiKaHighway #GatiShakti #BengaluruMysuruNationalHighway pic.twitter.com/wuN8BEax8y
— Nitin Gadkari (@nitin_gadkari) January 5, 2023
Advertisement
ಹೆದ್ದಾರಿಗೆ ಹೆಸರು ಇಡುವಂತೆ ಕೇಳಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ನಾನು ಕೂಡ ಆ ಪತ್ರವನ್ನ ನೋಡಿದ್ದೇನೆ. ಆದರೆ ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗೆ ನಂಬರ್ ಅಷ್ಟೇ ಕೊಡುತ್ತೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಬಳಿಕ ಪ್ರಧಾನಿಯವರ ಒಪ್ಪಿಗೆ ಪಡೆದು ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಫೆಬ್ರವರಿಯಲ್ಲಿ ದಶಪಥ ರಸ್ತೆ ಉದ್ಘಾಟನೆ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದ್ರೌಪದಿ ಮುರ್ಮು ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಗಡ್ಕರಿ ತಿಳಿಸಿದರು. ಇದನ್ನೂ ಓದಿ: ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಲಾಟರಿ ಮಾರಾಟ ಆರಂಭಿಸಿ – 15 ವರ್ಷಗಳ ಬಳಿಕ ರಾಜ್ಯದಲ್ಲಿ ಮತ್ತೆ ಲಾಟರಿ ಮಾರಾಟ?
ಈ ಹೆದ್ದಾರಿಯು ಕರ್ನಾಟಕದ (Karnataka) ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ನೂತನ ಹೆದ್ದಾರಿ ಅನುಕೂಲ ಆಗಲಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಹಾಗೂ ಕೆಲ ಸಂಚಾರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಹೆದ್ದಾರಿಯಿಂದ ಮೈಸೂರು (Mysuru) ಭಾಗದಲ್ಲಿ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಮಾಲಿನ್ಯ, ಟ್ರಾಫಿಕ್ ಜಾಮ್ ಜೊತೆ ಅಪಘಾತಗಳ ಸಂಖ್ಯೆ ಕ್ಷೀಣಿಸುವಂತೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
Minimizing the congestion in Bengaluru by driving the crowd to a comparatively cheaper cost-of-living city, the project will extend paths for new investments through industries, real estate, and educational institutions in Mysuru.#PragatiKaHighway #BengaluruMysuruNationalHighway pic.twitter.com/ikO1axIyGY
— Nitin Gadkari (@nitin_gadkari) January 5, 2023
ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ ಡಾಬಸ್ ಪೇಟೆ ಸೇರಿದಂತೆ ಪ್ರಮುಖ ನಗರಗಳನ್ನ ಬೆಸೆಯಲು ವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಪ್ರಯಾಣದ ಸಮಯ ತಗ್ಗಿಸುವುದು ನಮ್ಮ ಉದ್ದೇಶವಾಗಿದ್ದು ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿ ಉದ್ದೇಶದಿಂದ ಆ ಭಾಗದ ರಸ್ತೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k