ಸ್ಯಾಂಡಲ್‌ವುಡ್‌ನಲ್ಲಿ (Sandalwood) ಕೆಲ ದಿನಗಳಿಂದ ಸಂಚಲನ ಮೂಡಿಸಿದ ವಿಚಾರ ಅಂದರೆ ಕಿಚ್ಚ ಸುದೀಪ್- ನಿರ್ಮಾಪಕ ಕುಮಾರ್ (Producer Kumar) ಅವರ ವಾರ್. ಸುದೀಪ್ ತಮಗೆ ಕಾಲ್ ಶೀಟ್ ನೀಡದೇ ವಂಚನೆ ಮಾಡಿದ್ದಾರೆ ಎಂದು ನಿರ್ಮಾಪಕ ಕುಮಾರ್ ಆರೋಪಕ್ಕೆ ಸುದೀಪ್ ಆಪ್ತ ಸ್ಪಷ್ಟನೆ ನೀಡಿದ್ದಾರೆ. ನಿರ್ಮಾಪಕ ಕುಮಾರ್ ಆರೋಪದಲ್ಲಿ ಸತ್ಯ ಇಲ್ಲ ಎಂದು ಸುದೀಪ್ (Sudeep) ಪರ ಜಾಕ್ ಮಂಜು (Jack Manju) ಬ್ಯಾಟಿಂಗ್ ಮಾಡಿದ್ದಾರೆ.
ಕುಮಾರ್-ಸುದೀಪ್ ನಡುವೆ ವಾಗ್ವಾದ ನಡೆಯುತ್ತಿದೆ. ನಟ ಸುದೀಪ್ ಅಭಿಮಾನಿಗಳಿಗೆ ನಾನೇ ಕ್ಲಾರಿಟಿ ಕೊಡ್ತೀನಿ. ‘ಪಾರ್ಥ’ ಸಿನಿಮಾದಿಂದ ‘ವಿಕ್ರಾಂತ್ ರೋಣ’ (Vikranth Rona) ಸಿನಿಮಾದವರೆಗೂ ನಾನು ಸುದೀಪ್ ಜೊತೆ ಇದ್ದೇನೆ. ಕಿಚ್ಚ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅವರ ಸಿನಿಜರ್ನಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಬೆಳೆದಿದ್ದಾರೆ. ಇತ್ತೀಚಿಗೆ ಭಾಮಾ ಹರೀಶ್ ಅವರು ಸುದೀಪ್‌ನ ಭೇಟಿಯಾಗಿದ್ರು. ಕುಮಾರ್ ಪತ್ರ ಕಳಿಸಿದ್ರು, ನಾವು ಅದಕ್ಕೆ ಉತ್ತರ ಕೊಟ್ಟಿದ್ದೇವೆ. ಆದರೂ ಕುಮಾರ್ ಅವರು ನಾವು ಉತ್ತರ ಕೊಟ್ಟಿಲ್ಲ ಅಂತ ತಪ್ಪು ಸಂದೇಶ ಕೊಟ್ಟಿದ್ದಾರೆ.
‘ರನ್ನ’ ಸಿನಿಮಾ ಸಮಯದಲ್ಲಿ ಸುದೀಪ್-ಕುಮಾರ್ ಭೇಟಿಯಾಗಿದ್ದು ನಿಜ. ಕುಮಾರ್ ಆರ್ಥಿಕ ಕಷ್ಟದಲ್ಲಿದ್ದಾರೆ ಗೊತ್ತು. ಆ ಸಿನಿಮಾ ಬೇಗ ಸೆಟ್ಟೇರಲಿಲ್ಲ. ಕುಮಾರ್ ಅವರು ಒತ್ತಡದಲ್ಲಿ ಇದ್ದಿದ್ದರಿಂದ ಅವರು ಮಾತನಾಡುವ ರೀತಿ ಬದಲಾಯಿತು. ನಂತರ ಒಬ್ಬ ನಿರ್ದೇಶಕನನ್ನು ಸುದೀಪ್ ಆಯ್ಕೆ ಮಾಡಿದರು. ಆದರೆ ಆ ನಿರ್ದೇಶಕರು ಕೇಳಿದಷ್ಟು ಸಂಭಾವನೆ ನೀಡಲು ಕುಮಾರ್ ಒಪ್ಪಲಿಲ್ಲ. 2020ರ ಜನವರಿಯಲ್ಲಿ ಸುದೀಪ್ ‘ವಿಕ್ರಾಂತ್ ರೋಣ’ ಶುರುಮಾಡಿದರು. ಅದಕ್ಕೆ ಮೂರು ವರ್ಷ ಹಿಡಿಯಿತು. ಅನಾರೋಗ್ಯ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ಕುಮಾರ್ ಅವರನ್ನು ಭೇಟಿಯಾಗಲು ಸುದೀಪ್ ಅವರಿಗೆ ಸಾಧ್ಯವಾಗಲಿಲ್ಲ. ನಂತರ ಪ್ರಿಯಾ ಮೇಡಂ ಅವರ ಜೊತೆ ಕುಮಾರ್ ಮೀಟಿಂಗ್ ನಡೆಸಿದರು. ಕುಮಾರ್ ಅವರ ಕಷ್ಟ ಏನು ಎಂಬುದನ್ನು ಸುದೀಪ್‌ಗೆ ಹೇಳಲಾಯ್ತು. ನಂತರ ಅವರನ್ನು ಕರೆಸಿ ತಾತ್ಕಾಲಿಕವಾಗಿ 5 ಕೋಟಿ ರೂಪಾಯಿ ಸಹಾಯ ಮಾಡಲು ಸುದೀಪ್ ಮುಂದಾದರು. ಆದರೆ ಕುಮಾರ್ ಅವರು ಕೋಪದಲ್ಲಿ ಅದನ್ನು ಒಪ್ಪಿಕೊಳ್ಳಲಿಲ್ಲ. ಈ ರೀತಿ ಭಿಕ್ಷೆಯ ಹಣ ಬೇಡ, ಸಿನಿಮಾ ಮಾಡಿ ಅಂತ ಪಟ್ಟು ಹಿಡಿದರು ಎಂದು ಜಾಕ್ ಮಂಜು ಹೇಳಿದ್ದಾರೆ. ಇದನ್ನೂ ಓದಿ:ಕನ್ನಡತಿ ಶ್ರೀಲೀಲಾ ಹಿಂದಿಕ್ಕಿದ ‘ಸೀತಾರಾಮಂ’ ಬೆಡಗಿ ಮೃಣಾಲ್
ನನಗೆ ಬರಬೇಕಾದ ಹಣ ಕೊಡಿ ಎಂದು ಕುಮಾರ್ ಅವರು ಪಟ್ಟು ಹಿಡಿದಿದ್ದರು. ಅದು ಸುದೀಪ್‌ಗೆ ಬೇಸರ ಮೂಡಿಸಿತ್ತು. ನಾನು ಕುಮಾರ್ ಬಳಿ ಹಣ ತೆಗೆದುಕೊಂಡಿಲ್ಲ. ಸಹಾಯ ಕೇಳಿಕೊಂಡು ಬಂದವರು ಈಗ ಈ ರೀತಿ ಮಾತಾಡಿದ್ದು ಸರಿಯಲ್ಲ ಅಂತ ಸುದೀಪ್ ಕೊಂಚ ಗರಂ ಆಗಿದ್ದರು. ಸುದೀಪ್ ಅವರಿಂದ ತಮಗೆ ಹಣ ಬರಬೇಕು. ಆ ಬಳಿಕ ನಿಮ್ಮ ಸಾಲ ತೀರಿಸುತ್ತೇನೆ ಅಂತ ಎನ್. ಕುಮಾರ್ ಅವರು ಕಂಡಕಂಡಲ್ಲಿ ಹೇಳಿಕೊಂಡು ತಿರುಗಾಡಿದ್ದಾರೆ ಎಂಬುದು ಜಾಕ್ ಮಂಜು ಆರೋಪಿಸಿದ್ದಾರೆ. ನಿರ್ಮಾಪಕ ಕುಮಾರ್ ಅವರ ಆರೋಪಕ್ಕೆ ದಾಖಲೆಗಳಿಲ್ಲದೇ ಮಾತಾಡ್ತಿದ್ದಾರೆ. ಅದಕ್ಕಾಗಿ ನಾವು ಕಾನೂನು ಹೋರಾಟಕ್ಕೆ ಹೋಗಿದ್ದೀವಿ ಎಂದು ಜಾಕ್ ಮಂಜು ಮಾತನಾಡಿದ್ದಾರೆ.
ನಿನ್ನೆಯಷ್ಟೇ, ನಿರ್ಮಾಪಕ ಎಂ.ಎನ್.ಕುಮಾರ್, ನಾನು ಮಾಧ್ಯಮದ ಮುಂದೆ ಮಾತನಾಡಿದ್ದರು. ನಾನು ಹಣ ಕೊಟ್ಟು ಇಷ್ಟು ವರ್ಷ ಆಗಿದೆ ಸ್ಪಂದಿಸುತ್ತಿಲ್ಲ. ವಾಣಿಜ್ಯ ಮಂಡಳಿಯಲ್ಲಿ ಕುಳಿತು ಸಮಸ್ಯೆ ಬಗೆಹರಿಸಿಕೊಡಿ ಅಂತ ಕೇಳಿದ್ದೆ. ಈಗ ನನಗೆ ವಾಟ್ಸಪ್ ಮೂಲಕ ನೋಟಿಸ್ ಬಂದಿದೆ. ಪೋಸ್ಟ್ ಮುಖಾಂತರ ಬಂದಿಲ್ಲ. ಅನಾಮಿಕ ನಂಬರ್‌ನಿಂದ ಬಂದಿದೆ. ಅಫೀಶಿಯಲ್ ಆಗಿ ಬರುವ ತನಕ ರಿಯಾಕ್ಟ್ ಮಾಡಲ್ಲ. ಬಂದ ಬಳಿಕ ವಾಣಿಜ್ಯ ಮಂಡಳಿ, ನಿರ್ಮಾಪಕ ಅಸೋಸಿಯೇಷನ್ ನಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡ್ತವೆ ಎಂದು ಕುಮಾರ್ ಮಾತನಾಡಿದ್ದರು.
ಸುದೀಪ್ 45 ಸಿನಿಮಾ ಮಾಡಿದ್ದಾರೆ. ಅಷ್ಟು ಸಿನಿಮಾದ ಅಗ್ರಿಮೆಂಟ್ ಕೊಡೋಕೆ ಹೇಳಿ. ಸಿನಿಮಾ ನಡೆಯೋದು ನಂಬಿಕೆ ಮೇಲೆ. ಅದರಂತೆ ಹಣ ಕೊಟ್ಟಿದ್ದೇನೆ. ‘ವಿಕ್ರಾಂತ್ ರೋಣ’ ಬಳಿಕ ಸಿನಿಮಾ ಮಾಡಿಕೊಡ್ತೀನಿ ಅಂತ ಹೇಳಿದ್ರು ಮಾಡಲಿಲ್ಲ. ಆ ಕಡೆ ನಂದಕಿಶೋರ್ ‘ಮುತ್ತತ್ತಿ ಸತ್ಯರಾಮ’ ಟೈಟಲ್ ಗೊತ್ತಿಲ್ಲ ಅಂತಾರೆ. ಬಹಿರಂಗ ಚರ್ಚೆಗೆ ಬರಲಿ ಬೇಕಿದ್ದರೆ. ಕಾನೂನು ಎಲ್ಲರಿಗೂ ಒಂದೇ ಎಂದು ಕುಮಾರ್ ಸುದೀಪ್ ವಿರುದ್ಧ ಆರೋಪ ಮಾಡಿದ್ದರು. ಈ ಎಲ್ಲಾ ಆರೋಪಗಳಿಗೆ ಸುದೀಪ್ ಆಪ್ತ ಜಾಕ್ ಮುಂಜು ಈಗ ಸ್ಪಷ್ಟನೆ ನೀಡಿದ್ದಾರೆ.