ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಮಾಜಿ ಸಂಸದೆ ರಮ್ಯಾ ಅವರು ಫೇಕ್ ಖಾತೆಗಳ ಮಾಡಿದ ಪಾಠದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮ್ಯಾ ಕಳೆದ ವಾರ ನಕಲಿ ಖಾತೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪಾಠ ಮಾಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ಫೇಸ್‍ಬುಕ್ ಫೇಕ್ ಅಕೌಂಟ್ ಬಗ್ಗೆ ಕೇಳಿದ ಪ್ರಶ್ನೆಗೆ ರಮ್ಯಾ, ಒಬ್ಬರಿಗೆ ಮೂರು ನಾಲ್ಕು ಅಕೌಂಟ್ ಗಳಿದ್ದರೆ ತಪ್ಪು ಏನಿಲ್ಲ. ಆದರೆ ಫೇಕ್ ಅಕೌಂಟ್ ಬಗ್ಗೆ ಎಚ್ಚರಿಕೆ ಹೊಂದಿರಬೇಕು ಎಂದು ಉತ್ತರಿಸಿದ್ದಾರೆ. ಇದನ್ನು ಓದಿ: 2013ರ ಟ್ವೀಟ್ ಎತ್ತಿ ಮೋದಿ ವಿರುದ್ಧ ರಮ್ಯಾ ವಾಗ್ದಾಳಿ
Advertisement
ಈಗ ಈ ಪಾಠದ ವಿಡಿಯೋ ವೈರಲ್ ಆಗಿದ್ದೆ ತಡ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಮಾನಿಗಳು ನಕಲಿ ಖಾತೆಗಳಿಗೆ ರಮ್ಯಾ ಕುಮ್ಮಕ್ಕು ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್ ಆರಂಭಿಸಿದ್ದಾರೆ. ಇದನ್ನೂ ಓದಿ: ರಮ್ಯಾ ಹೆಸರಲ್ಲೇ ರಮ್ ಇದೆ, ಟ್ವೀಟ್ ಮಾಡುವಾಗೆಲ್ಲ ರಮ್ಯಾ ಕುಡಿದಿರುತ್ತಾರೆ ಅನ್ಸುತ್ತೆ: ಶಿಲ್ಪಾ ಗಣೇಶ್
Advertisement
https://www.youtube.com/watch?v=FPbeaJ04p7o