ಸೂಪರ್ ಸ್ಟಾರ್ ರಜನಿಕಾಂತ್ (Rajinikanth), ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು ತಮಿಳು ನಾಡಿನ (Tamil Nadu) ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ (Annamalai)ಮಾತನಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಯೋಗಿ ಆಗಿದ್ದರಿಂದ ಕಾಲು ಮುಟ್ಟಿ ನಮಸ್ಕರಿಸುವುದರಲ್ಲಿ ತಪ್ಪೇನೂ ಇಲ್ಲ ಎಂದಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ‘ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ (Controversy) ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ (Ayodhya) ತೆರಳಿ ಶ್ರೀರಾಮನ (Sriram) ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ.
ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ಅವರ ಕಾಲು ಹಿಡಿದು ನಮಸ್ಕರಿಸಿದ್ದರು. ನಂತರ (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಯೋಗಿಯ ಕಾಲು ಹಿಡಿದದ್ದು ಟೀಕೆಗೆ ಗುರಿಯಾಗಿತ್ತು. ಸಖತ್ ಟ್ರೋಲ್ ಕೂಡ ಆಗಿತ್ತು.
ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, ಐನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡ್ತಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]