ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲಾ ಎಂದು ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Sandalwood Queen Ramya), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕಲಾವಿದರಿಗೆ ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್ ವಿಚಾರವಾಗಿ ವಿಜಯನಗರ (Vijayanagara) ಜಿಲ್ಲೆಯ ಹಂಪಿಯಲ್ಲಿ (Hampi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಅದಕ್ಕೆ ನನ್ನ ಸಹಮತವಿದೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು. ಡಾ.ರಾಜ್‌ಕುಮಾರ್ ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋದು ಸೆಟಲ್ಡ್ ಮ್ಯಾಟರ್, ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೊಯ್ಲಿ
Advertisement
Advertisement
ಸದ್ಯ ನನಗೆ ಯಾವುದೇ ಹೊಸ ಚಲನಚಿತ್ರದ ನಟನೆ ಬಗ್ಗೆ ಯೋಜನೆಗಳಿಲ್ಲಾ. ಬಹಳ ದಿನಗಳ ಬಳಿಕ ಹಂಪಿಗೆ ಬಂದಿದ್ದೇನೆ. ನನಗೆ ಖುಷಿಯಾಗಿದೆ, ಸಂತೋಷವಾಗಿದೆ. ಸಚಿವ ಜಮೀರ್ ಅಹಮ್ಮದ್ ಮತ್ತು ವಿಜಯನಗರ ಜಿಲ್ಲಾಡಳಿತ ನನಗೆ ಆಹ್ವಾನ ನೀಡಿದೆ. ಹಾಗಾಗಿ ಬಂದಿದ್ದೇನೆ, ಖುಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು| ಪೋಷಕರ ಸಮ್ಮುಖದಲ್ಲಿ ಸಿಸಿಟಿವಿ ಪರೀಕ್ಷಿಸಿದ್ದಕ್ಕೆ ಮನನೊಂದು ಕೆರೆಗೆ ಹಾರಿದ ವಿದ್ಯಾರ್ಥಿನಿ
Advertisement