ಮಂಡ್ಯ: ಇನ್ನೂ ಸಮಯ ಇದೆ, ಅರ್ಜೆಂಟ್ ಏನೂ ಇಲ್ಲ ಎನ್ನುವ ಮೂಲಕ ಕಲಬುರಗಿ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಯಾರಿಗೆ ಎಂಬ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗೌಪ್ಯತೆ ಕಾಪಾಡಿದ್ದಾರೆ.
Advertisement
ಮಂಡ್ಯ ತಾಲೂಕಿನ ಕೀಲಾರ ಗ್ರಾಮದ ಲೇಟ್ ಮಂಚೇಗೌಡ ಕುಟುಂಬದಲ್ಲಿ ರಾಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಪಾಲಿಕೆಯಲ್ಲಿ ಮೇಯರ್ ಚುನಾವಣೆಗೆ ಇನ್ನೂ ಸಮಯವಿದೆ. ಈಗಲೇ ಏನು ಹೇಳುವುದಿಲ್ಲ ಎಂದು ಸುದ್ದಿಗಾರರಿಗೆ ಯಾವುದೇ ಮಾಹಿತಿ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೀನು ಹಿಡಿಯಲು ಹೋದ ಯುವಕ ನೀರುಪಾಲು
Advertisement
Advertisement
ಇಂದಿನಿಂದ ಅಧಿವೇಶನ ಪ್ರಾರಂಭವಾಗಿದೆ. ಇಂದು ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ನಡೆಯುವುದಿಲ್ಲ. ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಚರ್ಚೆಗಳು ಪ್ರಾರಂಭವಾಗಲಿದೆ. ಇಂದು ಜೆಡಿಎಸ್ ಶಾಸಕಾಂಗ ಸಭೆ ಕರೆದಿದ್ದು, ಅಧಿವೇಶನದಲ್ಲಿ ಯಾವ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಎಸ್‍ಐಯಿಂದ ಹೃದ್ರೋಗ ವಿಭಾಗದ ಸ್ಥಳಾಂತರ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು: ಬಿ.ಟಿ.ನಾಗಣ್ಣ
Advertisement
ಮಂಡ್ಯದಲ್ಲಿ ಅಕ್ರಮ ಜತೆಗೆ ಸಕ್ರಮ ಗಣಿಗಾರಿಕೆ ಸ್ಥಗಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಶಾಸಕರು ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಇದರಲ್ಲಿ ನಾನು ಮೂಗು ತೂರಿಸುವುದಿಲ್ಲ. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲು ದೊಡ್ಡ ಸಾಮಥ್ರ್ಯ ಇರೋರು ಇದ್ದಾರೆ. ಈ ಗೊಂದಲದಲ್ಲಿ ನಾನು ಮೂಗು ತೂರಿಸುವುದು ಸರಿಯಲ್ಲ. ಸಮರ್ಥರು ಈ ಜಿಲ್ಲೆಯಲ್ಲಿ ಇದ್ದಾರೆ ಅವರೇ ಸರಿಪಡಿಸಿಕೊಳ್ಳುತ್ತಾರೆ ಎಂದು ಸಂಸದೆ ಸುಮಲತಾ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ