ಬೆಂಗಳೂರು: ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ( C M D.K Shivakumar) ತಿರುಗೇಟು ನೀಡಿದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಹನೂರು ಶೂಟೌಟ್ (Hanur shootout) ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನ್ನೀರ್‌ಸೆಲ್ವಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮರಣದಂಡನೆ: ಗಲ್ಲು ಶಿಕ್ಷೆ ಬದಲು ನೋವುರಹಿತ ಪರ್ಯಾಯ ವಿಧಾನಕ್ಕೆ ಸುಪ್ರೀಂ ಕೋರ್ಟ್ ನಕಾರ
ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕು ಎಂದು ಹೇಳಿದರು.ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಶೀಘ್ರವೇ ಬಿಜೆಪಿ ಬರಗಾಲ ಅಧ್ಯಯನ ವರದಿ ಸಲ್ಲಿಕೆ: ಎನ್.ರವಿಕುಮಾರ್

