– ಕಾಂಗ್ರೆಸ್ ಸರ್ಕಾರದ ಬಗ್ಗೆ ಶ್ರೀಗಳು ಹೇಳಿದ್ದೇನು?
ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ (Rain) ಬಂದು ಜಳಪ್ರಳಯವಾಗುತ್ತದೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ವಿಪರೀತವಾದ ಜಲಪ್ರಳಯದಿಂದ (Flood) ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ ಮರಣ ಹೊಂದುತ್ತಾರೆ. ಎಲ್ಲೋ ಹಾಕಿದ ಬಾಂಬ್ ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬೀರುತ್ತದೆ. ವಿಜಯ ದಶಮಿಯಿಂದ ಸಂಕ್ರಾತಿಯವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೇ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ
Advertisement
Advertisement
ಇದು ಬಹುದೊಡ್ಡ ದುರ್ಘಟನೆಯಾಗಿದ್ದು, ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲವು ಸಾವು-ನೋವು ಸಂಭವಿಸುತ್ತವೆ. ಗೌರಿಶಂಕರ ಶಿವ ಶಿವ ಎಂದಿತು. ಭೂಮಿ ನಡುಗಿತು. ಮಳೆ ಬೆಳೆ ತಲ್ಲಣಗೊಂಡಿತು. ಜನರು ತೊಂದರೆಗೆ ಒಳಗಾಗುವರು. ನಾನು ಹೇಳಿದಾಗ ಒಂದು ಘಟನೆ ಆಗಿಯೇ ಆಗುತ್ತದೆ. ಅದನ್ನು ತಪ್ಪಿಸಿಕೊಳ್ಳುವುದು ಆಳುವವರ ಕೈಯಲ್ಲಿದೆ ಎಂದರು. ಇದನ್ನೂ ಓದಿ: ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ
Advertisement
ಕಾಂಗ್ರೆಸ್ (Congress) ಸರ್ಕಾರ ಸ್ಥಿರವಾಗಿರುತ್ತದೆ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ಒಳಿತಾಗುತ್ತದೆ. ಯಾವ ಮಹಿಳೆಗೆ ಸ್ವಾತಂತ್ರ್ಯವಿರಲಿಲ್ಲ, ಇವತ್ತು ಅವರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಅರ್ಜಿ ಹಾಕದಿದ್ರೆ ವಿದ್ಯುತ್ ಉಚಿತ ಇಲ್ಲ – ಸಚಿವ ಕೆ.ಜೆ.ಜಾರ್ಜ್
ಇದೆ ವೇಳೆ ಲೋಕಸಭಾ ಚುನಾವಣೆಯ (Lok Sabha Election) ವಿಚಾರವಾಗಿ ಮಾತನಾಡಿದ ಅವರು, ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ. ಕಾದು ನೋಡಿ. ಏನಾಗುತ್ತದೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ ಎಂದರು. ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಪೂರೈಕೆ ಬಗ್ಗೆ ಮೂಗು ಮತ್ತು ಬಾಯಿಯನ್ನು ಉದಾಹರಣೆಯಾಗಿ ಕೊಟ್ಟ ಅವರು, ಮೂಗು ಎಲ್ಲಾ ವಾಸನೆ ಗ್ರಹಿಸುತ್ತದೆ ಆದರೆ ಬಾಯಿಯಲ್ಲಿರುವ ಹೊಲಸನ್ನು ತೋರಿಸುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು. ಇದನ್ನೂ ಓದಿ: ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ
Web Stories